ಕನ್ನಡ ಕರಾವಳಿ ಸುದ್ದಿ:ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯೋಜಿಸಿದ್ದ ಜಿಲ್ಲಾಮಟ್ಟದ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ 16 ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿ ಚಿನ್ನದ ಪದಕ ಬೇಟೆಯೊಂದಿಗೆ ರಾಜ್ಯಮಟ್ಟಕ್ಕೆ ಆಯ್ಕೆಗೊಂಡು ದಾಖಲೆಯ ಹೊಸ ಭಾಷ್ಯ ಬರೆದಿದ್ದಾರೆ.
14ರವಯೋಮಾನದ ಬಾಲಕರ ವಿಭಾಗ ಸಚಿದ್, ರಿತ್ವಿಕ್, ಪ್ರತಿಕ್, ಆಯುಷ್, ಯಶ್ವಿನ್ ಮತ್ತು ಸಾತ್ವಿಕ್ ಪ್ರಥಮ ಸ್ಥಾನ ಸಹಿತ ಚಿನ್ನದ ಪದಕದೊಂದಿಗೆ ರಾಜ್ಯಮಟ್ಟದ ಬಾಕ್ಸಿಂಗ್ ಪಂದ್ಯಾವಳಿಗೆ ಆಯ್ಕೆಗೊಂಡರು.
ಜನತಾ ಸಮೂಹ ಸಂಸ್ಥೆಗಳ ಆಡಳಿತ ಮಂಡಳಿಯ ಉತ್ತೇಜನ, ಪ್ರತಿನಿತ್ಯದ ಕಟ್ಟುನಿಟ್ಟಿನ ತರಬೇತಿ ತರಗತಿಗಳು, ವಿದ್ಯಾರ್ಥಿಗಳು ಮತ್ತು ತರಬೇತುದಾರರ ನಿರಂತರ ಪರಿಶ್ರಮದಿಂದ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯು ವಿವಿಧ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಈಗಾಗಲೇ ಭರ್ಜರಿ ಜಯಭೇರಿ ಬಾರಿಸುತ್ತ ಹೊಸ ಹೊಸ ಸಾಧನೆಗಳಿಗೆ ಸಾಕ್ಷಿಯಾಗಿ ನಿಂತಿದೆ.
ಬಾಕ್ಸಿಂಗ್ ಸ್ಪರ್ಧೆಯಲ್ಲಿ ಅಮೋಘ ಜಯದೊಂದಿಗೆ ಸಂಸ್ಥೆಗೆ ಕೀರ್ತಿ ತಂದ ವಿಜೇತ ವಿದ್ಯಾರ್ಥಿಗಳಿಗೆ ಜನತಾ ಸಮೂಹ ಸಂಸ್ಥೆಗಳ ಅಧ್ಯಕ್ಷರು , ಕಾರ್ಯದರ್ಶಿಗಳು,ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕರು ಬೋಧಕ/ಬೋಧಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಅಭಿನಂದನೆಯನ್ನು ಸಲ್ಲಿಸಿದ್ದಾರೆ.