ತಂಗಿ ಸಾವಿಗೆ ಸೇಡು ತೀರಿಸಿಕೊಳ್ಳಲು ಬಾವನ ಕೊಲೆ
Views: 48
ಕನ್ನಡ ಕರಾವಳಿ ಸುದ್ದಿ: ತಂಗಿಯ ಸಾವಿಗೆ ಸೇಡು ತೀರಿಸಿಕೊಳ್ಳಲು ಆಕೆಯ ಪತಿಯನ್ನೇ ಚಾಕುವಿನಿಂದ ಇರಿದು ಕೊಂದಿರುವ ಘಟನೆ ನಡೆದಿದೆ.
ತಂಗಿಯ ಸಾವಿಗೆ ಆಕೆಯ ಪತಿಯೇ ಕಾರಣ ಎಂದು ಆರೋಪಿಸಿ ಭಾವ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಘಟನೆ ಬಳಿಕ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ನಿಜಾಮಾಬಾದ್ ಪೊಲೀಸ್ ಕಮಿಷನರ್ ಪಿ. ಸಾಯಿ ಚೈತನ್ಯ ಅವರ ಪ್ರಕಾರ, ಸಂತೋಷ್ ಯೂಟ್ಯೂಬರ್ ಹರಿಬಾಬು ಮೇಲೆ ಚಾಕುವಿನಿಂದ ದಾಳಿ ನಡೆಸಿದ್ದಾನೆ. ಬಳಿಕ ವಿಶಾಖಪಟ್ಟಣಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದಾಗ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಸಿಸಿಟಿವಿ ದೃಶ್ಯಗಳ ಆಧಾರದಲ್ಲಿ ಆರೋಪಿಯನ್ನು ಪತ್ತೆ ಹಚ್ಚಲಾಗಿದೆ.
ಹರಿಬಾಬು ತನ್ನ ಗರ್ಭಿಣಿ ಪತ್ನಿ ಸಿ.ವೈಷ್ಣವಿಯ ಕೊಲೆ ಆರೋಪದಲ್ಲಿ ಬಂಧನಕ್ಕೊಳಗಾಗಿ ಜೈಲು ಸೇರಿದ್ದ. ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ. ವೈಷ್ಣವಿಯನ್ನು ಕೊಲೆ ಮಾಡಿದ ಆರೋಪ ಹರಿಬಾಬು ಮೇಲಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಹರಿಬಾಬು ಮೇಲಿನ ದಾಳಿ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬಳಿಕ ಸಂತೋಷ್ ವಿಡಿಯೋ ಬಿಡುಗಡೆ ಮಾಡಿ, ತಂಗಿಯ ಸಾವಿಗೆ ಸೇಡು ತೀರಿಸಿಕೊಳ್ಳಲು ಹರಿಬಾಬುವನ್ನು ಕೊಂದಿರುವುದಾಗಿ ಹೇಳಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.






