ಯುವಜನ

ಭೀಕರ ರಸ್ತೆ ಅಪಘಾತ:ಇಂಜಿನಿಯರಿಂಗ್ ವಿದ್ಯಾರ್ಥಿಗಳಿಬ್ಬರು ಸಾವು.

Views: 53

ಕನ್ನಡ ಕರಾವಳಿ ಸುದ್ದಿ: ಬೆಂಗಳೂರಿನಲ್ಲಿ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತಕ್ಕೆ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಬಲಿಯಾಗಿದ್ದಾರೆ.

ಯಲಹಂಕ-ರಾಜಾನುಕುಂಟೆ ರಸ್ತೆಯಲ್ಲಿ ಈ ದುರ್ಘಟನೆ ನಡೆದಿದ್ದು, ಕೃಷಾಂತ್ ಮತ್ತು ಪ್ರದೀಪ್ ಮೃತ ವಿದ್ಯಾರ್ಥಿಗಳಾಗಿದ್ದಾರೆ. ಇಬ್ಬರೂ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದರು. ಬೆಳಗಿನ ಜಾವ ಸುಮಾರು 3 ಗಂಟೆ ವೇಳೆಗೆ ಸುತ್ತಾಡಲು ಎಂದು ಬೈಕ್‌ನಲ್ಲಿ ತೆರಳಿದ್ದ ವೇಳೆ,ರಾಯಲ್ ಎನ್‌ಫೀಲ್ಡ್ ಬೈಕ್ ಅಂಗಡಿಯ ಗೋಡೆಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಯಲಹಂಕ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Related Articles

Back to top button
error: Content is protected !!