ಶಿಕ್ಷಣ

ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜು: ಆಂಗ್ಲ ಭಾಷಾ ವೇದಿಕೆಯ ಅಡಿ ಕಾರ್ಯಗಾರ

Views: 15

ಕನ್ನಡ ಕರಾವಳಿ ಸುದ್ದಿ: ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ ಇಲ್ಲಿನ ಆಂಗ್ಲ ಭಾಷಾ ವೇದಿಕೆ ವತಿಯಿಂದ ವಿದ್ಯಾರ್ಥಿಗಳಿಗೆ ಇಂಗ್ಲೀಷ್ ಮಾತನಾಡುವ ಕಲೆಯ ಕಲಿಕೆಯ ಕಾರ್ಯಗಾರ ಹಮ್ಮಿಕೊಂಡಿದ್ದು ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರಾಮಕೃಷ್ಣ ಬಿ.ಜಿ, ದೀಪ ಬೆಳಗಿಸಿ ಉದ್ಘಾಟಿಸಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ಶ್ರೀಮತಿ ಅಮಾಂಡ ಸಿಕ್ಕೇರಾ ನಿವೃತ್ತ ಅಂಗ್ಲ ಭಾಷಾ ಉಪನ್ಯಾಸಕರು ಉಡುಪಿ ಇವರು ವಿದ್ಯಾರ್ಥಿಗಳಿಗೆ ಇಂಗ್ಲೀಷ್ ಮಾತನಾಡುವ ಕಲೆಯನ್ನು ಪ್ರಾಯೋಗಿಕವಾಗಿ ಮಾಡಿ ತೋರಿಸಿದರು. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡರು. ವೇದಿಕೆಯಲ್ಲಿ ಹಿರಿಯ ಉಪನ್ಯಾಸಕರಾದ ಶ್ರೀ ಚಂದ್ರಶೇಖರ ಉಪಸ್ಥಿತರಿದ್ದರು. ಆಂಗ್ಲಭಾಷಾ ವೇದಿಕೆಯ ಸಂಚಾಲಕರಾದ ಶ್ರೀಮತಿ ಜೋತ್ಸಾ ಪೈ ಯವರು ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿ ಕಾರ್ಯಕ್ರಮ ಸಂಘಟಿಸಿದರು. ವೇದಿಕೆಯ ಸಹ ಸಂಚಾಲಕರಾದ ಶ್ರೀಮತಿ ಗೀತಾ ಕುಂದರ್ ವಂದಿಸಿದರು.

Related Articles

Back to top button
error: Content is protected !!