ಯುವಜನ

ಬೈಕ್-ಲಾರಿ ಭೀಕರ ಅಪಘಾತ: ಬಿಸಿಎ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವು

Views: 73

ಕನ್ನಡ ಕರಾವಳಿ ಸುದ್ದಿ: ಬೈಕ್ ಗೆ ಸಿಮೆಂಟ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾಲೇಜು ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ನಡೆದಿದೆ.

ಬೆಂಗಳೂರು ಹೊರವಲಯ ಆನೇಕಲ್ ಪಟ್ಟಣದ ಹೊಸೂರು ಮುಖ್ಯರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಇಂಚರ (20) ಅಪಘಾತದಲ್ಲಿ ಸಾವನ್ನಪ್ಪಿದ ವಿದ್ಯಾರ್ಥಿನಿ.

ಹೊಂಪಲಘಟ್ಟ ಗ್ರಾಮದ ನಿವಾಸಿ ಇಂಚರ ಬಿಸಿಎ ವ್ಯಾಸಂಗ ಮಾಡುತ್ತಿದ್ದಳು. ಇಂಚರ ಕಾಲೇಜು ಮುಗಿಸಿಕೊಂಡು ಬೈಕ್ ನಲ್ಲಿ ಮನೆಗೆ ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

ಹೊಸೂರು ರಸ್ತೆಯ ಸವೆರಾ ಟೀ ಸ್ಟಾಲ್ ಬಳಿ ಬೈಕ್ ಗೆ ಹಿಂಬದಿಯಿಂದ ಲಾರಿ ಡಿಕ್ಕಿಯಾಗಿದೆ. ಪರಿಣಾಮ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಲಾರಿ ಚಾಲಕನ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

Related Articles

Back to top button
error: Content is protected !!