ಶಿಕ್ಷಣ

ಬ್ರಹ್ಮಾವರ ಎಸ್ಎಂಎಸ್ ಪದವಿ ಕಾಲೇಜು:ಎನ್‌ಎಸ್‌ಎಸ್‌ ದಿನಾಚರಣೆ ಅಂಗವಾಗಿ ಮಲೇರಿಯಾ, ಡೆಂಗ್ಯೂ ಜಾಗೃತಿ ಅಭಿಯಾನ

Views: 12

ಕನ್ನಡ ಕರಾವಳಿ ಸುದ್ದಿ: ಬ್ರಹ್ಮಾವರ ಎಸ್ಎಂಎಸ್ ಪದವಿ ಕಾಲೇಜಿನಲ್ಲಿ ಎನ್‌ಎಸ್‌ಎಸ್‌ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮದ ಅಂಗವಾಗಿ ಎನ್‌ಎಸ್‌ಎಸ್‌ ಧ್ವಜಾರೋಹಣ ಹಾಗೂ ಮಲೇರಿಯಾ ಮತ್ತು ಡೆಂಗ್ಯೂ ಕುರಿತು ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಬರ್ಟ್ ರೊಡ್ರಿಗಸ್ ಅವರು ಎನ್.ಎಸ್.ಎಸ್ ಧ್ವಜಾರೋಹಣ ನೆರವೇರಿಸಿದರು.ಈ ಸಂದರ್ಭದಲ್ಲಿ ಎನ್. ಎಸ್.ಎಸ್ ಕಾರ್ಯಕ್ರಮಾಧಿಕಾರಿಗಳಾದ ಶ್ರೀ ಪ್ರಕಾಶ್ ನಾಯಕ್ ಹಾಗೂ ಡಾ.ಮಂಜುನಾಥ ಉಡುಪ, ಮತ್ತು ಎನ್. ಎಸ್.ಎಸ್ ಸಹಾಯಕ ಅಧಿಕಾರಿ ಕುಮಾರಿ ನಕ್ಷಿತಾ ಶೆಟ್ಟಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ಮಾತುಗಳನ್ನು ಡಾ. ಮಂಜುನಾಥ ಉಡುಪ, ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿ ಅವರು ನೆರವೇರಿಸಿದರು. ಅವರು ಎನ್.ಎಸ್.ಎಸ್ ನ ಉದ್ದೇಶ, ಸಮಾಜ ಸೇವೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಹಾಗೂ ಸಮಾಜದಲ್ಲಿ ಜಾಗೃತಿ ಮೂಡಿಸುವಲ್ಲಿ ಎನ್.ಎಸ್.ಎಸ್ ಘಟಕದ ಮಹತ್ವವನ್ನು ವಿವರಿಸಿದರು.

ನಂತರ ಮಾತನಾಡಿದ ಪ್ರಾಂಶುಪಾಲರಾದ ಡಾ. ರಾಬರ್ಟ್ ರೊಡ್ರಿಗಸ್ ಅವರು ಎನ್.ಎಸ್.ಎಸ್ ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ, ಸಾಮಾಜಿಕ ಜವಾಬ್ದಾರಿ ಮತ್ತು ನಾಯಕತ್ವ ಗುಣಗಳನ್ನು ಬೆಳೆಸುವ ಪ್ರಮುಖ ವೇದಿಕೆಯಾಗಿದೆ ಎಂದು ಹೇಳಿದರು. ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸದ ಜೊತೆಗೆ ಸಮಾಜದ ಸಮಸ್ಯೆಗಳನ್ನು ಅರಿತುಕೊಂಡು, ಅವುಗಳ ಪರಿಹಾರಕ್ಕಾಗಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು. ವಿಶೇಷವಾಗಿ ಆರೋಗ್ಯ, ಸ್ವಚ್ಛತೆ ಹಾಗೂ ಪರಿಸರ ಸಂರಕ್ಷಣೆಯ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಗಳಲ್ಲಿ ಎನ್.ಎಸ್.ಎಸ್ ಸ್ವಯಂಸೇವಕರು ಹೆಚ್ಚಿನ ಉತ್ಸಾಹದಿಂದ ಭಾಗವಹಿಸಬೇಕು ಎಂದು ಅವರು ತಿಳಿಸಿದರು.

ಕಾರ್ಯಕ್ರಮದ ನಿರೂಪಣೆಯನ್ನು ಎನ್.ಎಸ್.ಎಸ್ ನಾಯಕಿ ಕುಮಾರಿ ಕೀರ್ತನಾ ಅವರು ಅಚ್ಚುಕಟ್ಟಾಗಿ ನಿರ್ವಹಿಸಿದರು.

ಧ್ವಜಾರೋಹಣ ಕಾರ್ಯಕ್ರಮದ ನಂತರ ಎನ್.ಎಸ್.ಎಸ್ ಸ್ವಯಂಸೇವಕರು ಮಲೇರಿಯಾ ಮತ್ತು ಡೆಂಗ್ಯೂ ಕುರಿತು ಮನೆ-ಮನೆ ಜಾಗೃತಿ ಅಭಿಯಾನವನ್ನು ಕೈಗೊಂಡರು. ಸ್ವಯಂಸೇವಕರು ಸುಮಾರು 50 ಮನೆಗಳಿಗೆ ಭೇಟಿ ನೀಡಿ, ಮಲೇರಿಯಾ ಮತ್ತು ಡೆಂಗ್ಯೂ ರೋಗಗಳ ಹರಡುವಿಕೆ, ಲಕ್ಷಣಗಳು ಹಾಗೂ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಿದರು.

ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳುವುದು, ಸೊಳ್ಳೆಗಳ ಉತ್ಪತ್ತಿ ತಾಣಗಳನ್ನು ನಿರ್ಮೂಲನೆ ಮಾಡುವುದು, ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಹಾಗೂ ಸೊಳ್ಳೆಗಳಿಂದ ರಕ್ಷಣೆ ಪಡೆಯುವ ಅಗತ್ಯದ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು.

ಈ ಕಾರ್ಯಕ್ರಮದ ಮೂಲಕ ಎನ್.ಎಸ್.ಎಸ್ ಸ್ವಯಂಸೇವಕರು ಸಮಾಜದೊಂದಿಗೆ ನೇರವಾಗಿ ಸಂಪರ್ಕ ಸಾಧಿಸಿ, ಆರೋಗ್ಯ ಮತ್ತು ಸ್ವಚ್ಛತೆಯ ಕುರಿತು ಜನರಲ್ಲಿ ಜಾಗೃತಿ ಮೂಡಿಸುವಲ್ಲಿ ಮಹತ್ವದ ಪಾತ್ರ ವಹಿಸಿದರು. “ನನಗಾಗಿ ಅಲ್ಲ, ನಿನಗಾಗಿ” ಎಂಬ ಎನ್.ಎಸ್.ಎಸ್ ಧ್ಯೇಯವಾಕ್ಯಕ್ಕೆ ಅನುಗುಣವಾಗಿ ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.

Related Articles

Back to top button
error: Content is protected !!