ಇತರೆ

ಕುಂದಾಪುರ: ಕೋಟೇಶ್ವರ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆತ್ಮಹತ್ಯೆ 

Views: 0

ಕನ್ನಡ ಕರಾವಳಿ ಸುದ್ದಿ: ಕೋಟೇಶ್ವರ ಪೇಟೆಯಲ್ಲಿರುವ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ರಾಘವೇಂದ್ರ ಜೋಗಿ (48) ಅವರು ಹೆಮ್ಮಾಡಿ ಕಟ್ ಬೆಲ್ತೂರಿನ ಮನೆ ಸಮೀಪ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ. 24 ರಂದು ವರದಿಯಾಗಿದೆ.

ಅವರು ಕೋಟೇಶ್ವರದ ಜೋಗಿ ವಿವಿಧೋದ್ದೇಶ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಕಳೆದ 18 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದರು. ಇವರು ಕಟ್ ಬೆಲ್ತೂರಿನಲ್ಲಿ  ಪತ್ನಿ ಹಾಗೂ ಮಗಳೊಂದಿಗೆ ವಾಸವಿದ್ದರು.

ಮನೆಯಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ತನ್ನ ಸಾವಿಗೆ ತಾನೇ ಕಾರಣ ಎನ್ನುವುದಾಗಿ ಬರೆದಿರುವುದಾಗಿ ತಿಳಿದು ಬಂದಿದೆ.

ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button
error: Content is protected !!