ಇತರೆ

ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ: ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್ ಜಾರಿ

Views: 18

ಕನ್ನಡ ಕರಾವಳಿ ಸುದ್ದಿ: ಬಂಟ್ವಾಳದ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರಿಗೆ ಪೊಲೀಸರು ನೊಟೀಸ್ ಜಾರಿ ಮಾಡಿದ್ದಾರೆ.

2025ರ ಮೇ ತಿಂಗಳಿನಲ್ಲಿ ಅಬ್ದುಲ್ ರಹಿಮಾನ್ ಹತ್ಯೆ ನಡೆದಿತ್ತು. ಹತ್ಯೆ ವೇಳೆ ಆರೋಪಿಗಳ ಜೊತೆ ಕಲ್ಲಡ್ಕ ಪ್ರಭಾಕರ್ ಭಟ್ ನಿರಂತರ ಫೋನ್ ಸಂಪರ್ಕದಲ್ಲಿದ್ದರು ಎಂಬ ಮಾಹಿತಿ ಹಿನ್ನೆಲೆಯಲ್ಲಿ ತನಿಖಾಧಿಕಾರಿಗಳು ಪ್ರಭಾಕರ್ ಭಟ್ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.

ಬಂಟ್ವಾಳ ಗ್ರಾಮಾಂತರ ಠಾಣೆಯ ಸಹಾಯಕ ತನಿಖಾಧಿಕಾರಿ ಪಿ.ಕಲೈಮಾರ್ ಅವರು ಕಲ್ಲಡ್ಕ ಪ್ರಭಾಕರ ಭಟ್ ಅವರಿಗೆ ನೋಟಿಸ್ ಜಾರಿ ಮಾಡಿದ್ದು, ಸೆ.26ರಂದು ಕಲ್ಲಡ್ಕದ ಮನೆಯಲ್ಲೇ ಪ್ರಭಾಕರ್ ಭಟ್ ಅವರ ವಿಚಾರಣೆ ನಡೆಯಲಿದೆ ಎಂದು ತಿಳಿದುಬಂದಿದೆ.

ಕಲ್ಲಡ್ಕ ಪ್ರಭಾಕರ ಭಟ್ ಅವರಿಗೆ ನೋಟಿಸ್ ನೀಡಿರುವ ಪೊಲೀಸರು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಪೊಲೀಸರ ಈ ಕ್ರಮಕ್ಕೆ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಇದರ ಹಿಂದೆ ವ್ಯವಸ್ಥಿತ ಸಂಚು ಎಂದು ಆರೋಪಿಸಿವೆ.

Related Articles

Back to top button
error: Content is protected !!