ಇತರೆ
ಮಂಗಳೂರು ತಡೆಗೋಡೆ ಕುಸಿದು ಬಿದ್ದ ಪ್ರಕರಣ: ಮೆದುಳು ನಿಷ್ಕ್ರಿಯ ಸ್ಥಿತಿಯಲ್ಲಿದ್ದ ವಿದ್ಯಾರ್ಥಿ ಸಾವು
Views: 26
ಕನ್ನಡ ಕರಾವಳಿ ಸುದ್ದಿ: ಮಂಗಳೂರು ನಗರದ ಎಮ್ಮೆಕೆರೆ ಕ್ರಾಸ್ ಬಳಿ ಇರುವ ರಾಮಲಕ್ಷ್ಮೀ ಸಭಾಭವನದಲ್ಲಿ ವಿದ್ಯಾರ್ಥಿ ಸಂಘಟನೆಯ ಪದಾಧಿಕಾರಿಗಳ ಸಮಾರಂಭದ ವೇಳೆ ಕಾರಿಡಾರ್ನ ಶಿಥಿಲಗೊಂಡ ತಡೆಗೋಡೆ ಕುಸಿದುಬಿದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ.
ಮೆದುಳು ನಿಷ್ಕ್ರಿಯ ಸ್ಥಿತಿಯಲ್ಲಿದ್ದ ವಿದ್ಯಾರ್ಥಿ ಮಹಮ್ಮದ್ ಸಮಾಜ್ ತಡರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಘಟನೆಯಲ್ಲಿ ಗಾಯಗೊಂಡ ಇತರೆ ನಾಲ್ವರು ವಿದ್ಯಾರ್ಥಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸ್ ಆಯುಕ್ತ ಸಿ.ಹೆಚ್. ಸುಧೀರ್ ಕುಮಾರ್ ರೆಡ್ಡಿ ಅವರು ಮಾಹಿತಿ ನೀಡಿದ್ದು, ಮೃತ ವಿದ್ಯಾರ್ಥಿ ಮಹಮ್ಮದ್ ಸಮಾಜ್ ಅವರ ತಂದೆ ನೀಡಿದ ದೂರಿನ ಮೇರೆಗೆ ಕಾರ್ಯಕ್ರಮದ ಆಯೋಜಕರು ಹಾಗೂ ಸಭಾಭವನದ ಕಟ್ಟಡ ಮಾಲೀಕರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಅಡಿಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.






