ಇತರೆ
ಕುಂದಾಪುರ ಪುರಸಭೆ ಮಾಜಿ ಸದಸ್ಯ ಕೆ.ಜಿ.ನಿತ್ಯಾನಂದ ನಿಧನ
Views: 252
ಕನ್ನಡ ಕರಾವಳಿ ಸುದ್ದಿ: ಕುಂದಾಪುರ ಪುರಸಭೆ ಸದಸ್ಯರಾಗಿ ಮೂರು ಅವಧಿಗೆ ಸೇವೆ ಸಲ್ಲಿಸಿದ್ದ ಕಾಂಗ್ರೆಸ್ ಪಕ್ಷದ ಮುಖಂಡ ಕೆ.ಜಿ.ನಿತ್ಯಾನಂದ (62) ಅ.1 ರಂದು ಮಣಿಪಾಲದ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಕಾಲೇಜು ದಿನಗಳಲ್ಲಿ ಎನ್ ಎಸ್ ಯುಐ ಮೂಲಕ ಗುರುತಿಸಿಕೊಂಡಿದ್ದ ಅವರು, ಯುವ ಕಾಂಗ್ರೆಸ್ ಹಾಗೂ ಕಾಂಗ್ರೆಸ್ ಪಕ್ಷದ ಪದಾಧಿಕಾರಿಯಾಗಿದ್ದರು. ಹೊಟೇಲ್ ಹಾಗೂ ಬಸ್ ಉದ್ಯಮಿಯಾಗಿದ್ದ ಅವರು ಉತ್ತಮ ಕಬಡ್ಡಿ ಪಟುವಾಗಿದ್ದರು. ವಿವಿಧ ಸಂಘ ಸಂಸ್ಥೆಗಳಲ್ಲಿಯೂ ಸೇವೆ ಸಲ್ಲಿಸಿದ್ದಾರೆ.






