ಇತರೆ
ಪ್ರೀತಿ ನಿರಾಕರಿಸಿದ್ದಕ್ಕೆ ನರ್ಸಿಂಗ್ ವಿದ್ಯಾರ್ಥಿನಿಯ ಭೀಕರ ಕೊಲೆ
Views: 86
ಕನ್ನಡ ಕರಾವಳಿ ಸುದ್ದಿ: ಪ್ರೇಮ ಪ್ರಸ್ತಾಪವನ್ನು ನಿರಾಕರಿಸಿದಳೆಂಬ ದ್ವೇಷದಿಂದ 18 ವರ್ಷದ ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳನ್ನು ಬೈಕ್ ಕ್ಲಚ್ ವೈರ್‌ನಿಂದ ಕತ್ತು ಹಿಸುಕಿ ಬರ್ಬರವಾಗಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ತೆಲಂಗಾಣದ ಜುಲುರುಪಾಡು ಮಂಡಲದ ವೆಂಗಣ್ಣಪಾಲೆಂ ಗ್ರಾಮದಲ್ಲಿ ನಡೆದಿದೆ.
ಆರಂಭದಲ್ಲಿ ಶಂಕಾಸ್ಪದ ಸಾವು ಎಂದು ದಾಖಲಾಗಿದ್ದ ಈ ಪ್ರಕರಣವು ಮರಣೋತ್ತರ ಪರೀಕ್ಷೆಯ ಬಳಿಕ ಭೀಕರ ಕೊಲೆ ಎಂಬುದು ದೃಢಪಟ್ಟಿದ್ದು, ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.






