ಶಿಕ್ಷಣ

ಕೋಟೇಶ್ವರ ಸರಕಾರಿ ಪ್ರಥಮ ದರ್ಜೆ ಕಾಲೇಜು: “ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗಾವಕಾಶಗಳು” ಕಾರ್ಯಗಾರ

Views: 100

ಕನ್ನಡ ಕರಾವಳಿ ಸುದ್ದಿ: ಕಾಳಾವರ  ವರದರಾಜ ಎಂ ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ ಕೋಟೇಶ್ವರ ಇಲ್ಲಿನ ಆಂತರಿಕ ಗುಣಮಟ್ಟ ಭರವಸಾ ಕೋಶ ಹಾಗೂ ವಾಣಿಜ್ಯಶಾಸ್ತ್ರ ವಿಭಾಗ ಇದರ ಸಂಯುಕ್ತ  ಆಶ್ರಯದಲ್ಲಿ  ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗಾವಕಾಶಗಳು  ಎಂಬ ವಿಷಯದಲ್ಲಿ ಒಂದು ದಿನದ ಕಾರ್ಯಾಗಾರ  ನಡೆಯಿತು.

ಕರ್ನಾಟಕ ಬ್ಯಾಂಕ್ ನ ಸಹಾಯಕ ಮಹಾಪ್ರಬಂಧಕ  ಹಾಗೂ ಪ್ರಾದೇಶಿಕ ಮುಖ್ಯಸ್ಥ  ರಮೇಶ ವೈದ್ಯ ಈ ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ಕಾರ್ಯಕ್ರಮದ ಮುಖ್ಯ ಅತಿಥಿ ಹಾಗೂ ಸಂಪನ್ಮೂಲ ವ್ಯಕ್ತಿ  ರಮೇಶ ವೈದ್ಯ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ, ಬ್ಯಾಂಕಿಂಗ್ ಕ್ಷೇತ್ರದಲ್ಲಿ ಹಲವಾರು ಬದಲಾವಣೆಗಳಾಗಿದ್ದು  ಈ ಕ್ಷೇತ್ರದಲ್ಲಿ ಪ್ರಸ್ತುತ ವೈವಿಧ್ಯಮಯ ಉದ್ಯೋಗಾವಕಾಶಗಳು ಕಂಡುಬರುತ್ತವೆ.  ಭಾರತೀಯ ರಿಸರ್ವ್ ಬ್ಯಾಂಕ್,  ಸ್ಟೇಟ್ ಬ್ಯಾಂಕ್, ರಾಷ್ಟ್ರೀಕೃತ ಬ್ಯಾಂಕುಗಳು ಹಾಗೂ ಎಲ್ಲಾ ಖಾಸಗಿ ವಲಯದ ಬ್ಯಾಂಕುಗಳಲ್ಲಿ  ಕ್ಲರ್ಕ್,  ಪ್ರೊಬೆಶನರಿ ಆಫೀಸರ್,  ಸ್ಪೆಷಲ್ ಆಫೀಸರ್ ಸೇರಿದಂತೆ ಹಲವಾರು ರೀತಿಯ ಉದ್ಯೋಗಾವಕಾಶಗಳಿವೆ. ಈ ಎಲ್ಲ ಉದ್ಯೋಗಗಳಿಗೆ ಬ್ಯಾಂಕುಗಳು ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಸಂದರ್ಶನಗಳನ್ನು ನಡೆಸುತ್ತವೆ. ಬ್ಯಾಂಕಿಂಗ್ ಕ್ಷೇತ್ರದ ಉದ್ಯೋಗಕ್ಕೆ ಕೇವಲ ಪದವಿಯ ಅಂಕಗಳು ಸಾಕಾಗುವುದಿಲ್ಲ. ಶೈಕ್ಷಣಿಕ ಅರ್ಹತೆಯೊಂದಿಗೆ ಸಂವಹನ ಕೌಶಲ್ಯ, ತಾರ್ಕಿಕ ಚಿಂತನೆ ಮತ್ತು ಕಂಪ್ಯೂಟರ್ ಜ್ಞಾನ ಅತ್ಯಗತ್ಯ. ಈ ಆಯ್ಕೆ ಪ್ರಕ್ರಿಯೆಯನ್ನು ಅರಿತುಕೊಂಡು ಅಗತ್ಯ ಕೌಶಲಗಳೊಂದಿಗೆ ಸೂಕ್ತ ತಯಾರಿ ನಡೆಸಿ ಪ್ರಯತ್ನಿಸಿದರೆ ಬ್ಯಾಂಕ್ ಉದ್ಯೋಗವನ್ನು ಗಳಿಸಿ ಉತ್ತಮ ವೇತನ, ಸಾಮಾಜಿಕ ಸ್ಥಾನಮಾನ ಹಾಗೂ ಯೋಗ್ಯ ಜೀವನವನ್ನು ನಡೆಸಬಹುದು ಎಂದು ಹೇಳಿದರು

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ನಾಗರಾಜ ವೈದ್ಯ ಎಂ ಮಾತನಾಡಿ, ಸೂಕ್ತ ಮಾರ್ಗದರ್ಶನ ಹಾಗೂ ಪ್ರಯತ್ನಶೀಲತೆಯಿಂದ  ಸಾಧನೆಯ ಮಾರ್ಗ ತೆಗೆದುಕೊಳ್ಳುತ್ತದೆ  ನಮ್ಮ ವಿದ್ಯಾರ್ಥಿಗಳು  ಬ್ಯಾಂಕಿಂಗ್ ಕ್ಷೇತ್ರದಲ್ಲಿರುವ ಉದ್ಯೋಗಾವಕಾಶಗಳನ್ನು ಬಳಸಿಕೊಳ್ಳುವಂತೆ ಕರೆ ನೀಡಿದರು.

ಕಾಲೇಜಿನ ವಾಣಿಜ್ಯಶಾಸ್ತ್ರ  ವಿಭಾಗದ ಮುಖ್ಯಸ್ಥ ಡಾ. ಉದಯ ಶೆಟ್ಟಿ. ಕೆ  ಪ್ರಾಸ್ತಾವಿಸಿದರು.ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ ಸುಬ್ರಮಣ್ಯ.ಎ ಕಾಲೇಜಿನ ಐ ಕ್ಯೂಎಸಿ  ಸಂಚಾಲಕಿ ಮೋಹಿನಿ ಅತ್ತಿಮನಿ ಉಪಸ್ಥಿತರಿದ್ದರು.. ಪ್ರತಿಮಾ  ಅತಿಥಿಗಳನ್ನು ಪರಿಚಯಿಸಿ ಸ್ವಾಗತಿಸಿದರು. ನಾಗೇಂದ್ರ ಕಾರ್ಯಕ್ರಮ ನಿರೂಪಿಸಿದರು.

Related Articles

Back to top button
error: Content is protected !!