ಇತರೆ

ತರಬೇತಿ ನಿರತ ವಿಮಾನ ರೈತನ ಹೊಲದಲ್ಲಿ ತುರ್ತು ಭೂಸ್ಪರ್ಶ

Views: 21

ಕನ್ನಡ ಕರಾವಳಿ ಸುದ್ದಿ: ತಾಂತ್ರಿಕ ದೋಷದಿಂದಾಗಿ ತರಬೇತಿ ನಿರತ ವಿಮಾನವೊಂದು ರೈತರ ತೊಗರಿ ಬೆಳೆ ಇದ್ದ ಜಮೀನಿನಲ್ಲಿ ತುರ್ತು ಭೂಸ್ಪರ್ಶ ಮಾಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.

ಕಲಬುರಗಿ ಜಿಲ್ಲೆಯ ಮಾಡಬೂಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಪೈಲಟ್‌ ಸಮಯ ಪ್ರಜ್ಞೆ ಹಾಗೂ ತಕ್ಷಣದ ನಿರ್ಧಾರದಿಂದ ಸಂಭವಿಸಬಹುದಾದ ದೊಡ್ಡ ಅನಾಹುತವೊಂದು ತಪ್ಪಿದ್ದು, ವಿಮಾನದಲ್ಲಿದ್ದ ಪೈಲಟ್‌ ಸೇರಿದಂತೆ ಇಬ್ಬರು ಸುರಕ್ಷಿತವಾಗಿದ್ದಾರೆ.

ತರಬೇತಿ ಹಾರಾಟದಲ್ಲಿದ್ದ ವಿಮಾನವು ಕಲಬುರಗಿ ವಿಮಾನ ನಿಲ್ದಾಣದ ಸುತ್ತಮುತ್ತ ಸಂಚರಿಸುತ್ತಿದ್ದ ವೇಳೆ ತಾಂತ್ರಿಕ ದೋಷ ಕಾಣಿಸಿಕೊಂಡಿದೆ ಎನ್ನಲಾಗಿದೆ. ವಿಮಾನದಲ್ಲಿ ಸಮಸ್ಯೆ ಉಂಟಾದ ಕಾರಣ ಅದನ್ನು ಸಾಮಾನ್ಯವಾಗಿ ವಿಮಾನ ನಿಲ್ದಾಣದಲ್ಲಿ ಇಳಿಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿತ್ತು.

ತಕ್ಷಣ ಪರಿಸ್ಥಿತಿಯನ್ನು ಅರಿತ ಪೈಲಟ್‌ ಸಮಯ ಪ್ರಜ್ಞೆ ಮೆರೆದಿದ್ದು, ವಿಮಾನವನ್ನು ಜನವಸತಿ ಪ್ರದೇಶದಿಂದ ದೂರವಿರುವ ಪ್ರದೇಶದತ್ತ ಕೊಂಡೊಯ್ದಿದ್ದಾರೆ. ವಿಮಾನ ನಿಲ್ದಾಣದ ಸಮೀಪದಲ್ಲಿದ್ದ ರೈತರ ಜಮೀನನ್ನು ಗುರುತಿಸಿ, ಯಾವುದೇ ತೊಂದರೆ ಆಗದಂತೆ ತುರ್ತು ಭೂಸ್ಪರ್ಶ ಮಾಡಿದ್ದಾರೆ.

Related Articles

Back to top button
error: Content is protected !!