ಇತರೆ

ಬೆಂಗಳೂರಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಬಸ್‌  ಬೆಂಕಿಗಾಹುತಿ

Views: 79

ಕನ್ನಡ ಕರಾವಳಿ ಸುದ್ದಿ: ಚಲಿಸುತ್ತಿದ್ದ ಸ್ಲೀಪರ್ ಬಸ್ ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ನೋಡ ನೋಡುತ್ತಿದ್ದಂತೆ ಬಸ್ ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ.

ಬೆಂಗಳೂರಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಬಸ್‌ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಶಿವಮೊಗ್ಗದ ಆನಂದಪುರ ಬಳಿಯ ಮುಂಬಾಳು ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಬೆಂಗಳೂರು – ಹೊನ್ನಾವರ NH-206 ಮಾರ್ಗದಲ್ಲಿ ಬಸ್‌ ಸಂಚರಿಸುತ್ತಿತ್ತು. ಈ ವೇಳೆ ಬಸ್‌ನಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಬಸ್‌ನಲ್ಲಿದ್ದ ಪ್ರಯಾಣಿಕರನ್ನು ಚಾಲಕ, ಹಾಗೂ ಕ್ಲೀನರ್‌ ತಕ್ಷಣ ಕೆಳಗಿಳಿಸಿದ್ದಾರೆ. ಇದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಬಹುತೇಕ ಪ್ರಯಾಣಿಕರು ಶಿವಮೊಗ್ಗದಲ್ಲೇ ಇಳಿದಿದ್ದರು. ಬಸ್‌ನಲ್ಲಿ ಇಬ್ಬರು ಪ್ರಯಾಣಿಕರು ಮಾತ್ರ ಸಾಗರಕ್ಕೆ ತೆರಳುತ್ತಿದ್ದರು. ಹೆಚ್ಚಿನ ಪ್ರಯಾಣಿಕರಿದ್ದಿದ್ದರೆ ಅನಾಹುತ ಆಗುವ ಸಾಧ್ಯತೆ ಇತ್ತು.

ಪ್ರಯಾಣಿಕರನ್ನು ಕೆಳಗಿಳಿಸುತ್ತಿದ್ದಂತೆ ಬೆಂಕಿ ಬಸ್ ತುಂಬಾ ವ್ಯಾಪಿಸಿದ್ದು, ನೋಡ ನೋಡುತ್ತಿದ್ದಂತೆ ಬಸ್‌ ಸುಟ್ಟು ಕರಕಲಾಗಿದೆ.‌

ಆನಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Related Articles

Back to top button
error: Content is protected !!