ಇತರೆ
ಅಡಿಕೆ ಕೊಯ್ಯುತ್ತಿದ್ದ ವೇಳೆ ವಿದ್ಯುತ್ ತಂತಿಗೆ ದೋಟಿ ತಾಗಿ ವ್ಯಕ್ತಿ ಸಾವು
Views: 28
ಕನ್ನಡ ಕರಾವಳಿ ಸುದ್ದಿ: ಅಡಿಕೆ ಕೊಯ್ಯುತ್ತಿದ್ದ ವೇಳೆ ವಿದ್ಯುತ್ ತಂತಿಗೆ ದೋಟಿ ತಾಗಿ ವ್ಯಕ್ತಿಯೊಬ್ಬರು ವಿದ್ಯುತ್ ಶಾಕ್‌ಗೆ ಒಳಗಾಗಿ ಮೃತಪಟ್ಟ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ.
ಧರ್ಮಸ್ಥಳ ಗ್ರಾಮದ ಅಜಿಕುರಿ ಬಳಿಯ ನಝೀರ್(38) ಮೃತ ವ್ಯಕ್ತಿ. ಅ.4 ರಂದು ಮನೆಯ ಸಮೀಪದ ಅಡಿಕೆ ಮರದಿಂದ ದೋಟಿ ಮೂಲಕ ಅಡಿಕೆ ಕೊಯ್ಯುತ್ತಿದ್ದ ವೇಳೆ, ಸಮೀಪದಲ್ಲೇ ಹಾದುಹೋಗಿದ್ದ ವಿದ್ಯುತ್ ತಂತಿಗೆ ಆಕಸ್ಮಿಕವಾಗಿ ದೋಟಿ ತಾಗಿದ ಪರಿಣಾಮ ವಿದ್ಯುತ್ ಶಾಕ್ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದರು.
ತಕ್ಷಣವೇ ಅವರನ್ನು ಸ್ಥಳೀಯ ಆಸ್ಪತ್ರೆಯಗೆ ಕರೆದೊಯ್ಯಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅ.8 ರ ಗುರುವಾರ ಬೆಳಗ್ಗಿನ ಜಾವ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






