ದೇವಿ ಮೂರ್ತಿ ಮೆರವಣಿಗೆ ವೇಳೆ ಟ್ರಕ್ ಡಿಕ್ಕಿ:ಮೂವರ ದುರ್ಮರಣ, ನಾಲ್ವರು ಗಂಭೀರ
Views: 24
ಕನ್ನಡ ಕರಾವಳಿ ಸುದ್ದಿ: ದುರ್ಗಾಮಾತಾ ದೌಡ ದೇವಿ ಮೂರ್ತಿಯನ್ನು ಮೆರವಣಿಗೆ ಮೂಲಕ ಕೊಂಡೊಯ್ಯುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಭಾನುವಾರ ಹುಕ್ಕೇರಿ ತಾಲೂಕಿನ ಮಣಗುತ್ತಿ ಹಾಗೂ ಹತ್ತರಗಿ ಟೋಲ್‌ಗೇಟ್ ಸಮೀಪ ನಡೆದಿದೆ.
ಹುಂಚ್ಯಾನಟ್ಟಿ ಗ್ರಾಮದಿಂದ ಬೆಳಗಾವಿಗೆ ಬಂದು ದುರ್ಗಾಮಾತಾ ದೌಡ ದೇವಿ ಮೂರ್ತಿಯನ್ನು ಮರಳಿ ಹುಕ್ಕೇರಿ ತಾಲೂಕಿನ ಹುಂಚ್ಯಾನಟ್ಟಿ ಗ್ರಾಮಕ್ಕೆ ಮೆರವಣಿಗೆ ಮೂಲಕ ಕೊಂಡೊಯ್ಯಲಾಗುತ್ತಿತ್ತು. ಈ ವೇಳೆ ಹಿಂಬದಿಯಿಂದ ಬಂದ ಟ್ರಕ್ ಮೆರವಣಿ ಗೆಯಲ್ಲಿದ್ದವರ ಮೇಲೆ ಹರಿದ ಪರಿಣಾಮ ಭೀಕರ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಪ್ರಕಾಶ, ಮಹೇಶ್ ಹಾಗೂ ದಾನೇಶ್ವರಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು,ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಬೆಳಗಾವಿ ಜಿಲ್ಲಾಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಗೊಂಡವರ ಹೆಸರು ಮತ್ತು ಹೆಚ್ಚಿನ ವಿವರಗಳು ಇನ್ನೂ ಲಭ್ಯವಾಗಿಲ್ಲ. ಯಮಕನಮರಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.






