ಕರಾವಳಿ
ಅಂಡಮಾನ್ ವಾಯುಭಾರ ಕುಸಿತ: ಕರಾವಳಿಯ ಈ ಜಿಲ್ಲೆಗಳಲ್ಲಿ ಮತ್ತೆ ಮಳೆ ಮುನ್ಸೂಚನೆ
Views: 47
ಕನ್ನಡ ಕರಾವಳಿ ಸುದ್ದಿ: ಅಂಡಮಾನ್ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗುತ್ತಿರುವುದರಿಂದ ಅಕ್ಟೋಬರ್ 14 ರಿಂದ 19ರ ನಡುವೆ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಕರಾವಳಿ ಮತ್ತು ಒಳನಾಡು ಭಾಗಗಳಲ್ಲಿ ಮತ್ತೆ ಗುಡುಗು ಸಹಿತ ವ್ಯಾಪಕ ಮಳೆ ನಿರೀಕ್ಷೆಯಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಕೊಡಗು ಕುಂದಾಪುರ, ಬೈಂದೂರು, ಬ್ರಹ್ಮಾವರ, ಹೆಬ್ರಿ, ಕಾರ್ಕಳ ಹಾಗೂ ಕಾಪು ತಾಲೂಕುಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.






