ರಾಜಕೀಯ

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ.ಸುಧಾ ಯಾದವ್ ನೇಮಕ

Views: 13

ಕನ್ನಡ ಕರಾವಳಿ ಸುದ್ದಿ: ಬಿಜೆಪಿಯ ಹಿರಿಯ ನಾಯಕಿ, ಮಾಜಿ ಸಂಸದೆ ಸುಧಾ ಯಾದವ್‌ ಅವರು ಕರ್ನಾಟಕದ ನೂತನ ರಾಜ್ಯಪಾಲರಾಗಿ ನೇಮಕಗೊಂಡಿದ್ದಾರೆ.

ಹರಿಯಾಣದ ಸುಧಾ ಅವರು ಬಿಜೆಪಿ ಸಂಸದೀಯ ಮಂಡಳಿಯ ಸದಸ್ಯರಾಗಿದ್ದಾರೆ. ಅವರು ಈ ಹಿಂದೆ 13ನೇ ಲೋಕಸಭೆಯಲ್ಲಿ (1999–2004) ಹರಿಯಾಣದ ಮಹೇಂದ್ರಗಢ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. 2019ರಿಂದ 2022ರವರೆಗೆ ಹಿಂದುಳಿದ ವರ್ಗಗಳ ರಾಷ್ಟ್ರೀಯ ಆಯೋಗದ ಸದಸ್ಯರಾಗಿದ್ದರು.

60 ವರ್ಷ ವಯಸ್ಸಿನ ಅವರು ರಸಾಯನ ವಿಜ್ಞಾನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಹಾಗೂ ಐಐಟಿ ರೂರ್ಕಿಯಿಂದ ಪಿಎಚ್‌.ಡಿ ಪಡೆದಿದ್ದಾರೆ. ಅವರ ಪತಿ, ಬಿಎಸ್‌ಎಫ್‌ ಡೆಪ್ಯುಟಿ ಕಮಾಂಡೆಂಟ್ ಆಗಿದ್ದ ಸುಖ್‌ಬೀರ್‌ ಸಿಂಗ್ ಯಾದವ್ 1999ರ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾಗಿದ್ದರು.

ನೂತನ ರಾಜ್ಯಪಾಲರನ್ನು ನೇಮಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೋಮವಾರ ಆದೇಶ ಹೊರಡಿಸಿದ್ದಾರೆ.

ಈ ನೇಮಕಾತಿಗಳು ಅವರು ತಮ್ಮ ಸಂಬಂಧಿತ ಕಚೇರಿಗಳ ಅಧಿಕಾರವನ್ನು ವಹಿಸಿಕೊಳ್ಳುವ ದಿನಾಂಕದಿಂದ ಜಾರಿಗೆ ಬರುತ್ತವೆ ಎಂದು ರಾಷ್ಟ್ರಪತಿ ಭವನದ ಪ್ರಕಟಣೆ ತಿಳಿಸಿದೆ.

Related Articles

Back to top button
error: Content is protected !!