ಜನಮನ
ಶಾಲೆಯಲ್ಲಿ ಶೌಚಾಲಯಕ್ಕೆ ಹೋಗಿದ್ದ ಎರಡನೇ ತರಗತಿ ಬಾಲಕಿ ಬಾಯಿಗೆ ಬಟ್ಟೆ ತುರುಕಿ ಅಪಹರಣ ಯತ್ನ

Views: 0
ಎರಡನೇ ತರಗತಿ ವಿದ್ಯಾರ್ಥಿಯನ್ನು ಅಪಹರಿಸಲು ಯತ್ನಿಸಿರುವ ಘಟನೆ ಮೈಸೂರು ನಂಜನಗೂಡು ತಾಲೂಕಿನ ಹುಲ್ಲಹಳ್ಳಿಯಲ್ಲಿ ನಡೆದಿದೆ.
ವಿದ್ಯಾರ್ಥಿನಿ ಶಾಲೆಯ ಶೌಚಾಲಯಕ್ಕೆ ತೆರಳಿದ ವೇಳೆ ಇಬ್ಬರು ದುಷ್ಕರ್ಮಿಗಳು ಆಕೆಯ ಬಾಯಿಗೆ ಬಟ್ಟೆ ತುರುಕಿ ಅಪಹರಿಸಲು ಯತ್ನಿಸಿದ್ದಾರೆ .ಈ ವೇಳೆ ವಿದ್ಯಾರ್ಥಿನಿ ಜೋರಾಗಿ ಕಿರುಚಿಕೊಂಡ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಆಕೆಯನ್ನು ಬಿಟ್ಟು ಪರಾರಿಯಾಗಿದ್ದಾರೆ.
ಶಾಲೆಯ ಮುಖ್ಯ ಶಿಕ್ಷಕರು ಕೂಡಲೇ ಹುಲ್ಲಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.







