ರಾಜಕೀಯ
ರಸ್ತೆ ಅಪಘಾತದಲ್ಲಿ ಬಿಜೆಪಿ ಮುಖಂಡ ಸಾವು
Views: 57
ಕನ್ನಡ ಕರಾವಳಿ ಸುದ್ದಿ: ಭೀಕರ ರಸ್ತೆ ಅಪಘಾತದಲ್ಲಿ ಮಾಲೂರಿನ ಬಿಜೆಪಿ ಮುಖಂಡ ಶಿವಕುಮಾರ್ ಮೃತಪಟ್ಟಿದ್ದಾರೆ. ಮುಂಬರುವ ಚುನಾವಣೆಯಲ್ಲಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಪಡೆಯುವ ಆಕಾಂಕ್ಷೆ ಹೊಂದಿದ್ದ 50 ವರ್ಷದ ಶಿವಕುಮಾರ್, ರೇಂಜ್ ರೋವರ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಈ ದುರಂತ ಸಂಭವಿಸಿದೆ. ಕಾರಿನಲ್ಲಿದ್ದ ಇತರ ಮೂವರು ಪ್ರಯಾಣಿಕರೂ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿದ್ದಾರೆ.
ಶಿವಕುಮಾರ್ ಚಿತ್ರದುರ್ಗದಿಂದ ಮಾಲೂರಿಗೆ ರೇಂಜ್ ರೋವರ್ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಹೊಸಕೋಟೆ–ದಾಬಸ್ಪೇಟೆ ರಿಂಗ್ ರಸ್ತೆಯಲ್ಲಿ ಮುಂದೆ ಸಾಗುತ್ತಿದ್ದ ಗ್ಯಾಸ್ ಸಾಗಣೆ ಲಾರಿಗೆ ಕಾರು ಡಿಕ್ಕಿ ಹೊಡೆದಿದೆ. ಓವರ್ಟೇಕ್ ಮಾಡಲು ಪ್ರಯತ್ನಿಸಿದ ಸಂದರ್ಭದಲ್ಲಿ ಅತಿವೇಗದಿಂದ ಅಪಘಾತ ಸಂಭವಿಸಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಸಮೀಪ ಸಂಭವಿಸಿದೆ.






