ರಾಜಕೀಯ
ಎಲ್.ಕೆ. ಅಡ್ವಾಣಿ ಆಸ್ಪತ್ರೆಗೆ ದಾಖಲು
Views: 10
ಕನ್ನಡ ಕರಾವಳಿ ಸುದ್ದಿ: ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಕೇಂದ್ರ ಗೃಹ ಸಚಿವ ಎಲ್.ಕೆ. ಅಡ್ವಾಣಿ (98) ಅವರು ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದು, ಶುಕ್ರವಾರ ಸಂಜೆ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ.
ತಜ್ಞ ವೈದ್ಯರ ತಂಡ ಅವರ ಆರೋಗ್ಯದ ಮೇಲೆ ತೀವ್ರ ನಿಗಾ ಇರಿಸಿದೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದಾಗಿ ಅವರು ಮೇ ತಿಂಗಳಲ್ಲೂ ಇದೇ ಆಸ್ಪತ್ರೆಗೆ ದಾಖಲಾಗಿದ್ದರು. ಕಳೆದ ವಾರವಷ್ಟೇ ಪ್ರಧಾನಿ ಮೋದಿ ಅವರು ಅಡ್ವಾಣಿ ಅವರನ್ನು ಭೇಟಿ ಮಾಡಿದ್ದರು.






