ಇತರೆ

ಸ್ಕೂಟರ್- ಆಟೋ ರಿಕ್ಷಾ ಡಿಕ್ಕಿ:ಅಂಚೆ ಇಲಾಖೆಯ ಪೋಸ್ಟಲ್ ಅಸಿಸ್ಟೆಂಟ್‌ ಸಾವು 

Views: 32

ಕನ್ನಡ ಕರಾವಳಿ ಸುದ್ದಿ: ಮುಕ್ರಂಪಾಡಿಯಲ್ಲಿ ಸ್ಕೂಟರ್ ಮತ್ತು ಆಟೋರಿಕ್ಷಾ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪುತ್ತೂರು ಅಂಚೆ ಇಲಾಖೆಯ ಪೋಸ್ಟಲ್ ಅಸಿಸ್ಟೆಂಟ್‌ ಮಮತಾ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮಮತಾ ಅವರು ಸಂಜೆ ಅಂಚೆ ಇಲಾಖೆಯ ಕೆಲಸ ಮುಗಿಸಿ ಸ್ಕೂಟರ್‌ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಮುಕ್ರಂಪಾಡಿಯಲ್ಲಿ ಸ್ಕೂಟರ್ ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿತ್ತು. ಅಪಘಾತದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ತಕ್ಷಣ ಪುತ್ತೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಮೃತ ಮಮತಾ ಅವರು ಪುತ್ತೂರು ಕೆಎಸ್‌ಆರ್‌ಟಿಸಿಯಲ್ಲಿ ಟ್ರಾಫಿಕ್ ಕಂಟ್ರೋಲರ್ ಆಗಿ ಕಾರ್ಯನಿರ್ವಹಿಸುತ್ತಿರುವ ಸೀತಾರಾಮ ಅವರ ಪತ್ನಿಯಾಗಿದ್ದು, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Related Articles

Back to top button
error: Content is protected !!