ರಾಜಕೀಯ

ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸೌಮ್ಯಾ ರೆಡ್ಡಿ ದಿಢೀರ್ ರಾಜೀನಾಮೆ!

Views: 35

ಕನ್ನಡ ಕರಾವಳಿ ಸುದ್ದಿ: ರಾಮಲಿಂಗಾ ರೆಡ್ಡಿ ಪುತ್ರಿ ಮಾಜಿ ಶಾಸಕಿ, ಸೌಮ್ಯಾ ರೆಡ್ಡಿ, ಕಾಂಗ್ರೆಸ್ KPCC ಮಹಿಳಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ದಿಢೀರ್ ರಾಜೀನಾಮೆ ನೀಡಿದ್ದಾರೆ.

ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಯಾವುದೇ ಪ್ರಾತಿನಿಧ್ಯ ನೀಡದ ಹಿನ್ನಲೆ, ಈ ಬಗ್ಗೆ ಹೈಕಮಾಂಡ್ ಗಮನಕ್ಕೆ ತರುವ ಸಲುವಾಗಿ, ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ತಮ್ಮ ರಾಜೀನಾಮೆ ಅರ್ಜಿ ಸಲ್ಲಿಸಿದ್ದರು.

ಇನ್ನು ತಾವು ಕೇವಲ ಎರಡು ವರ್ಷಗಳ ಮಟ್ಟಿಗೆ ಮಾತ್ರ ಈ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷ ಸ್ಥಾನ ವಹಸಿಕೊಳ್ಳುವುದಾಗಿ ಒಪ್ಪಿಕೊಂಡಿದ್ದು, ಅದರಂತೆ ತಮ್ಮ ಅಧಿಕಾರವಧಿ ಮುಗಿದಿದೆ, ಹೀಗಾಗಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾಗಿ ಮಾಜಿ ಶಾಸಕಿ ತಿಳಿಸಿದ್ದಾರೆ. ಪಕ್ಷವು ನೂತನ ಅಧ್ಯಕ್ಷರನ್ನು ನೇಮಕ ಮಾಡುವವರೆಗೆ ತಾವು ಇದೇ ಸ್ಥಾನದಲ್ಲಿ ಮುಂದುವರಿಯೂದಾಗಿಯೂ ಹೇಳಿದ್ದಾರೆ.

ಮುಂದಿನ ದಿನಗಳಲ್ಲಿ ವಿಧಾನಸಭೆ, ರಾಜ್ಯಸಭೆ ಹಾಗೂ ಲೋಕಸಭೆ ಚುನಾವಣೆಗಳು ನಡೆಯಲಿದ್ದು, ತಮ್ಮನ್ನು ಸಕ್ರಿಯ ಕಾಂಗ್ರೆಸ್ ಪಕ್ಷದ ಕಾರ್ಯಕರ್ತೆಯನ್ನಾಗಿ ಗುರಿತಿಸಿಕೊಂಡು, ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಪಕ್ಷ ಸಂಘಟನೆಯಲ್ಲಿ ತೊಡಗುವುದಾಗಿ ಸೌಮ್ಯಾ ರೆಡ್ಡಿ ಹೇಳಿಕೊಂಡಿದ್ದಾರೆ.

ಹೈಕಮಾಂಡ್ಗೆ ಮಾಜಿ ಶಾಸಕಿ ಸೌಮ್ಯಾ ರೆಡ್ಡಿ ಸಲ್ಲಿಸಿರುವ ರಾಜೀನಾಮೆ ಪತ್ರದಲ್ಲಿ, ರಾಜ್ಯ ಸರ್ಕಾರದಲ್ಲಿ ಒಂದೇ ಒಂದು ಸಚಿವ ಸ್ಥಾನವನ್ನು ಮಹಿಳೆಯರಿಗೆ ನೀಡಲಾಗಿಲ್ಲ. ಇದು ತಮಗೆ ವೈಯಕ್ತಿಕವಾಗಿ ಬೇಸರಕ್ಕೆ ಕಾರಣವಾಗಿದ್ದು, ಪಕ್ಷದ ಹಿರಿಯ ನಾಯಕರ ಗಮನಕ್ಕೆ ಕೂಡ ತಂದಿರುತ್ತೇನೆ. ಈಗ ನಾನು, ಮಹಿಳಾ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದು, ನಮ್ಮ ಸರ್ಕಾರದಿಂದ ರಾಜ್ಯದ ಮಹಿಳೆಯರಿಗೆ ಜಾರಿಯಾಗಿರುವ ಯೋಜನೆಗಳ ಬಗ್ಗೆ ಜನಜಾಗೃತಿ ಮೂಡಿಸಲು ಮುಂದಾಗುತ್ತೇನೆಂದು ತಿಳಿಸಿದ್ದಾರೆ. ಅಂತೆಯೇ 2028 ಹಾಗೂ 2029 ರಲ್ಲಿ ನಡೆಯಲಿರುವ ಸಾರ್ವತ್ರಿಕ ಚುನಾವಣೆಗಳಲ್ಲಿ ಪಕ್ಷದ ಸಕ್ರಿಯ ಕಾರ್ಯಕರ್ತೆಯಾಗಿ ಗುರುತಿಸಕೊಳ್ಳ ಬಯಸುತ್ತೇನೆಂದು ಹೇಳಿದ್ದಾರೆ,

Related Articles

Back to top button
error: Content is protected !!