ಪ್ರಾರ್ಥನೆಗೆ ಹೋದ ಬಾಲಕನಿಗೆ ಲೈಂಗಿಕ ಕಿರುಕುಳ: ಚರ್ಚ್ ಪಾದ್ರಿ ಅರೆಸ್ಟ್
Views: 61
ಕನ್ನಡ ಕರಾವಳಿ ಸುದ್ದಿ: ಬಾಲಕರ ಮೇಲೆ ಲೈಂಗಿಕ ದೌರ್ಜನ್ಯವೆಸಗುತ್ತಿದ್ದ ಆರೋಪದಲ್ಲಿ ಚರ್ಚ್ ಪಾದ್ರಿಯೊಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಚರ್ಚ್ ಗೆ ಪ್ರಾರ್ಥನೆಗೆ ಬರುತ್ತಿದ್ದ ಬಾಲಕರಿಗೆ ಪಾದ್ರಿ ಲೈಂಗಿಕ ಕಿರುಕುಳ ನೀಡಿತ್ತಿದ್ದ ಬಗ್ಗೆ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಬಾಲಕರ ಪೋಷಕರು ನೀಡಿದ ದೂರುನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಪಾದ್ರಿಯನ್ನು ಬಂಧಿಸಿದ್ದಾರೆ.
ಮಂಗಳೂರಿನ ವೆಲೆನ್ಸಿಯಾ ಚರ್ಚ್ನ ಫಾದರ್ ಸಿಪ್ರಿಯನ್ ಪಿಂಟೋ ಬಂಧಿತ ಆರೋಪಿ. ಈತ ಪ್ರಾರ್ಥನೆಗೆ ಹೋದ ಸಂದರ್ಭದಲ್ಲಿ ಬಾಲಕರಿಗೆ ಲೈಂಗಿಕ ಕಿರುಕುಳ ನೀಡಿದ್ದ ಎಂದು ಆರೋಪಿಸಲಾಗಿದೆ.
ಈ ಬಗ್ಗೆ ಇಬ್ಬರು ಮಕ್ಕಳು ಪೋಷಕರ ಬಳಿ ಹೇಳಿಕೊಂಡಿದ್ದು, ಬಳಿಕ ಪೋಷಕರು ಈ ಬಗ್ಗೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪೋಷಕರು ದೂರು ದಾಖಲಿಸಿದ್ದರು. ಈ ದೂರಿನ ಮೇರೆಗೆ ಮಂಗಳೂರು ದಕ್ಷಿಣ ಠಾಣೆ ಪೊಲೀಸರು ಪೊಲೀಸರು, ಸಿಪ್ರಿಯನ್ ಪಿಂಟೋ ಅವರನ್ನು ಬಂಧಿಸಿದ್ದಾರೆ.
ಪ್ರಾರ್ಥನೆಗೆ ಹೋದ ಸಂದರ್ಭದಲ್ಲಿ ಬಾಲಕನಿಗೆ ‘Sweet boy I Love You’ ಅಂತಾ ಪುಸಲಾಯಿಸಿ ಪಾದ್ರಿ ಲೈಂಗಿಕ ಕಿರುಕುಳ ನೀಡಿದ್ದ. ಬಾಲಕರು ಈ ಬಗ್ಗೆ ಪೋಷಕರಿಗೆ ತಿಳಿಸಿದ್ದಾರೆ. ಪೋಷಕರು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ತನ್ನ ವಿರುದ್ಧ ಪೊಕ್ಸೋ ಕೇಸ್ ದಾಖಲಾಗುತ್ತಿದ್ದಂತೆ ಪಾದ್ರಿ ತಲೆಮರೆಸಿಕೊಂಡಿದ್ದ. ಹಾಸನ ಜಿಲ್ಲೆಯ ಸಕಲೇಶಪುರದ ಸಂಬಂಧಿ ಮನೆಯಲ್ಲಿ ಅಡಗಿದ್ದ ಪಾದ್ರಿಯನ್ನು ಪೊಲೀಸರು ಬಂಧಿಸಿದ್ದಾರೆ.






