ಇತರೆ

ಮನೆಗೆ ನುಗ್ಗಿ ವಕೀಲರೊಬ್ಬರ ಹಣೆಗೆ ಗುಂಡಿಟ್ಟು ಬರ್ಬರ ಹತ್ಯೆ

Views: 50

ಕನ್ನಡ ಕರಾವಳಿ ಸುದ್ದಿ: ವಕೀಲರೊಬ್ಬರ ಹಣೆಗೆ ಗುಂಡಿಟ್ಟು ಹತ್ಯೆಗೈದಿರುವ ಘಟನೆ ವೈಟ್‌ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

ಪಟ್ಟಂದೂರು ಅಗ್ರಹಾರದ ನಿವಾಸಿ ಮಂಜುನಾಥ್ (42) ಮೃತ ದುರ್ದೈವಿ. ಭಾನುವಾರ ರಾತ್ರಿ ಈ ಕೃತ್ಯ ನಡೆದಿದೆ.

ಮಂಜುನಾಥ್ ಅವರ ಮನೆಗೆ ಬಂದ ಇಬ್ಬರು ಹಂತಕರು ಬಾಗಿಲು ಬಡೆದಿದ್ದಾರೆ. ಮಂಜುನಾಥ್ ಅವರು ಬಾಗಿಲು ತೆಗೆಯುತ್ತಿದ್ದಂತೆ, ನೇರವಾಗಿ ಅವರ ಹಣೆಗೆ ಗುಂಡು ಹಾರಿಸಿ ಹತ್ಯೆಗೈದು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ ಮಂಜುನಾಥ್ ಅವರು ವೈಟ್‌ಫೀಲ್ಡ್ ಭಾಗದಲ್ಲಿ ಹೊಂದಿದ್ದ ಜಮೀನನ್ನು ಶೆಡ್‌ಗಳಿಗೆ ಬಾಡಿಗೆಗೆ ನೀಡಿದ್ದರು. ಈ ಜಮೀನನ್ನು ಆರೋಪಿಗಳು ಬಾಡಿಗೆಗೆ ಪಡೆದಿದ್ದರು. ಕೃತ್ಯ ನಡೆಯುವುದಕ್ಕೂ ಒಂದು ಗಂಟೆ ಮುಂಚೆ ಬಾಡಿಗೆ ಹಣ ಪಾವತಿಸುವ ವಿಚಾರವಾಗಿ ಮಂಜುನಾಥ್ ಹಾಗೂ ಆರೋಪಿಗಳ ನಡುವೆ ತೀವ್ರ ವಾಗ್ವಾದ ನಡೆದಿತ್ತು. ಈ ಹಣಕಾಸಿನ ವೈಮನಸ್ಸು ಹಾಗೂ ಜಮೀನು ವ್ಯಾಜ್ಯವೇ ಹತ್ಯೆಗೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಸದ್ಯ ಘಟನಾ ಸ್ಥಳಕ್ಕೆ ವೈಟ್‌ಫೀಲ್ಡ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ತಲೆಮರೆಸಿಕೊಂಡಿರುವ ಹಂತಕರಿಗಾಗಿ ಬಲೆ ಬೀಸಿದ್ದು, ತೀವ್ರ ಹುಡುಕಾಟ ನಡೆಸಲಾಗುತ್ತಿದೆ ಎಂದು ವೈಟ್‌ಫೀಲ್ಡ್ ವಿಭಾಗದ ಡಿಸಿಪಿ ಸೈದುಲು ಅಡಾವತ್ ತಿಳಿಸಿದ್ದಾರೆ.

Related Articles

Back to top button
error: Content is protected !!