ಬೈಕ್ ರಸ್ತೆ ಬದಿಯ ಗಟಾರಕ್ಕೆ ಬಿದ್ದು ಸವಾರ ಸ್ಥಳದಲ್ಲೇ ಸಾವು
Views: 59
ಕನ್ನಡ ಕರಾವಳಿ ಸುದ್ದಿ: ಸರ್ವೀಸ್‌ಗೆ ನೀಡಿದ್ದ ದ್ವಿಚಕ್ರ ವಾಹನವನ್ನು ವಾಪಸ್ ತರಲು ತೆರಳಿದ್ದ ಯುವಕನೊಬ್ಬ ಮಾರ್ಗಮಧ್ಯೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಪ್ರಾಣ ಕಳೆದುಕೊಂಡಿದ್ದಾನೆ. ಯಲ್ಲಾಪುರ-ಶಿರಸಿ ರಸ್ತೆಯ ತಾರೇಹಳ್ಳಿ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ಬೈಕ್ ಗಟಾರಕ್ಕೆ ಬಿದ್ದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ.
ಯಲ್ಲಾಪುರ-ಶಿರಸಿ ಮುಖ್ಯ ರಸ್ತೆಯ ತಾರೇಹಳ್ಳಿ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ಬೈಕ್ ರಸ್ತೆಬದಿಯ ಗಟಾರಕ್ಕೆ ಬಿದ್ದ ಪರಿಣಾಮ, ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸಂಭವಿಸಿದೆ.
ಬಿಸಗೋಡ ಸಮೀಪದ ಕೆಳಗಿನ ಪಾಲಿ ನಿವಾಸಿ ವಿವೇಕ ದತ್ತಾತ್ರೇಯ ಭಟ್ಟ ಮೃತಪಟ್ಟ ಸವಾರ. ಶಿರಸಿಗೆ ಸರ್ವೀಸ್‌ಗಾಗಿ ನೀಡಿದ್ದ ತಮ್ಮ ದ್ವಿಚಕ್ರ ವಾಹನವನ್ನು ಮರಳಿ ತರಲೆಂದು ಶಿರಸಿಗೆ ತೆರಳಿದ್ದ ವಿವೇಕ ಅವರು, ವಾಪಸ್ ಬರುವಾಗ ತಾರೇಹಳ್ಳಿ ಕ್ರಾಸ್ ಸಮೀಪ ವಾಹನದ ಮೇಲಿನ ನಿಯಂತ್ರಣ ಕಳೆದುಕೊಂಡಿದ್ದಾರೆ.
ವಾಹನ ನಿಯಂತ್ರಣ ತಪ್ಪಿ ಏಕಾಏಕಿ ರಸ್ತೆಬದಿಯ ಗಟಾರಕ್ಕೆ ಬಿದ್ದ ರಭಸಕ್ಕೆ ತೀವ್ರ ಸ್ವರೂಪದ ಗಾಯಗಳಾಗಿದ್ದವು. ಪರಿಣಾಮವಾಗಿ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.






