ಯುವಜನ

ದಿಢೀರ್ ಅಸ್ವಸ್ಥಗೊಂಡು ಕಾಲೇಜು ವಿದ್ಯಾರ್ಥಿನಿ ಸಾವು

Views: 36

ಕನ್ನಡ ಕರಾವಳಿ ಸುದ್ದಿ: ಯಲ್ಲಾಪುರ ಪಟ್ಟಣದ ಕಾಳಮ್ಮ ನಗರದ ನಿವಾಸಿ, ಸ್ಥಳೀಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಿಕಾಂ ಪ್ರಥಮ ವರ್ಷದ ವಿದ್ಯಾರ್ಥಿನಿ ಅನುಷಾ (19) ಅವರು ದಿಢೀರ್ ಅಸ್ವಸ್ಥಗೊಂಡು ಮೃತಪಟ್ಟ ದಾರುಣ ಘಟನೆ ಸಂಭವಿಸಿದೆ.

ಅನುಷಾ ಅವರು ಅಭ್ಯಾಸದಲ್ಲಿ ತೀವ್ರ ಶ್ರದ್ಧೆ ಹೊಂದಿದ್ದು, ಕಾಲೇಜಿನ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದರು. ಹಸನ್ಮುಖಿಯಾಗಿದ್ದ ಅವರು ಕಾಲೇಜಿನ ಉಪನ್ಯಾಸಕರು ಹಾಗೂ ಸಹಪಾಠಿಗಳ ಪ್ರೀತಿಗೆ ಪಾತ್ರರಾಗಿದ್ದರು.

ಇದ್ದಕ್ಕಿದ್ದಂತೆ ಅವರ ಆರೋಗ್ಯದಲ್ಲಿ ಏರುಪೇರಾಗಿ, ರಕ್ತದೊತ್ತಡದಲ್ಲಿ (Blood Pressure) ತೀವ್ರ ವ್ಯತ್ಯಾಸ ಕಾಣಿಸಿಕೊಂಡಿತ್ತು ಎನ್ನಲಾಗಿದೆ. ಇದರಿಂದಾಗಿ ತೀವ್ರವಾಗಿ ಅಸ್ವಸ್ಥಗೊಂಡ ಅವರನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲು ವ್ಯವಸ್ಥೆ ಮಾಡಲಾಯಿತಾದರೂ, ದುರದೃಷ್ಟವಶಾತ್ ಆಸ್ಪತ್ರೆ ತಲುಪುವ ಮೊದಲೇ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಕೇವಲ 19ನೇ ವಯಸ್ಸಿನಲ್ಲಿಯೇ ಅನುಷಾ ಅವರು ಅಕಾಲಿಕವಾಗಿ ಅಗಲಿರುವುದು ಕುಟುಂಬಸ್ಥರು, ಸ್ನೇಹಿತರು ಹಾಗೂ ಕಾಲೇಜಿನ ಬೋಧಕ ವರ್ಗಕ್ಕೆ ತೀವ್ರ ಆಘಾತ ಉಂಟುಮಾಡಿದೆ. ವಿದ್ಯಾರ್ಥಿನಿಯ ನಿಧನಕ್ಕೆ ಕಾಲೇಜಿನ ಪ್ರಾಚಾರ್ಯರು, ಉಪನ್ಯಾಸಕರು ಹಾಗೂ ವಿದ್ಯಾರ್ಥಿ ವೃಂದದವರು ಕಂಬನಿ ಮಿಡಿದು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Related Articles

Back to top button
error: Content is protected !!