ಇತರೆ

ಮಾಬುಕಳದಲ್ಲಿ ಭೀಕರ ಅಪಘಾತ: ಹಂಗಾರಕಟ್ಟೆ ಅಂಚೆ ಕಚೇರಿ ನೌಕರ ಸಾವು 

Views: 181

ಕನ್ನಡ ಕರಾವಳಿ ಸುದ್ದಿ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರ ತಾಲೂಕಿನ ಮಾಬುಕಳ ಸರ್ಕಲ್‌ನಲ್ಲಿ ಗುರುವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸೈಕಲ್ ಸವಾರರೊಬ್ಬರು ಮೃತಪಟ್ಟಿದ್ದಾರೆ.

ಲಾರಿಯೊಂದು ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬಾಳ್ಕುದ್ರು ನಿವಾಸಿ ರೊನಾಲ್ಡ್ ಲೂವಿಸು (62) ಮೃತಪಟ್ಟವರು.

ಹಂಗಾರಕಟ್ಟೆ ಅಂಚೆ ಕಚೇರಿಯಲ್ಲಿ ಅರೆಕಾಲಿಕ ನೌಕರರಾಗಿ ಕಾರ್ಯನಿರ್ವಹಿಸುತ್ತಿದ್ದ ಅವರು ಗುರುವಾರ ಸಂಜೆ  ಸೈಕಲ್‌ನಲ್ಲಿ ಹಂಗಾರಕಟ್ಟೆಯಿಂದ ಮಾಬುಕಳ ಸರ್ಕಲ್‌ನಲ್ಲಿ ದಾಟುತ್ತಿದ್ದ ವೇಳೆ ಈ  ದುರ್ಘಟನೆ ಸಂಭವಿಸಿದೆ.

ಡಿಕ್ಕಿಯ ತೀವ್ರತೆಗೆ ಸೈಕಲ್‌ನಿಂದ ರಸ್ತೆಗೆ ಬಿದ್ದ ರೊನಾಲ್ಡ್ ಅವರ ತಲೆಗೆ ಗಂಭೀರ ಗಾಯಗಳಾಗಿವೆ. ತಕ್ಷಣ ಸ್ಥಳೀಯರು ಟೋಲ್‌ಗೇಟ್‌ನ ಆಂಬುಲೆನ್ಸ್ ಮೂಲಕ ಅವರನ್ನು ಬ್ರಹ್ಮಾವರದ ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ, ರೊನಾಲ್ಡ್ ಅವರನ್ನು ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ.

ಘಟನಾ ಸ್ಥಳಕ್ಕೆ ಕೋಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Related Articles

Back to top button
error: Content is protected !!