ಇತರೆ

ಕಾರು ಅಪಘಾತ: ಆರೆಸ್ಸೆಸ್‌ ಮುಖಂಡ ಬೇಳೂರು ಗುರುದಾಸ್ ಶೆಣೈ ನಿಧನ

Views: 107

ಕನ್ನಡ ಕರಾವಳಿ ಸುದ್ದಿ: ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೋಟ ಜಂಕ್ಷನ್‌ನಲ್ಲಿ ಸೋಮವಾರ ಮುಂಜಾನೆ ಸಂಭವಿಸಿದೆ.

ಮೃತರನ್ನು ಕೋಟ ಮಣೂರು ನಿವಾಸಿ, ಆರೆಸ್ಸೆಸ್‌ ಮುಖಂಡ ಬೇಳೂರು ಗುರುದಾಸ್ ಶೆಣೈ ಎಂದು ಗುರುತಿಸಲಾಗಿದೆ.

ಗುರುದಾಸ್ ಶೆಣೈ ಅವರು ಕೋಟ ಜಂಕ್ಷನ್‌ನಲ್ಲಿ ಸೈಕಲ್‌ನಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಉಡುಪಿ ಕಡೆಯಿಂದ ಕುಂದಾಪುರದತ್ತ ವೇಗವಾಗಿ ಬರುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಢಿಕ್ಕಿಯ ರಭಸಕ್ಕೆ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಸೈಕಲ್ ಸವಾರ ರಸ್ತೆಗೆ ಎಸೆಯಲ್ಪಟ್ಟು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಅಪಘಾತದಲ್ಲಿ ಕಾರು ಚಾಲಕ, ಕೋಟೇಶ್ವರದ ಬೀಜಾಡಿ ನಿವಾಸಿ ಪ್ರದೀಪ್ ಕಾಂಚನ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುವನ್ನು ಕೋಟದ ಜೀವನ್ ಮಿತ್ರ ನಾಗರಾಜ್ ಪುತ್ರನ್ ಅವರು ಆಂಬುಲೆನ್ಸ್ ಮೂಲಕ ಬ್ರಹ್ಮಾವರದ ಖಾಸಗಿ ಆಸ್ಪತ್ರೆಗೆ ಸಾಗಿಸಲು ನೆರವಾದರು.

ಘಟನಾ ಸ್ಥಳಕ್ಕೆ ಕೋಟ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related Articles

Back to top button
error: Content is protected !!