ಸಾಂಸ್ಕೃತಿಕ

ಡಾ.ಹೆಚ್.ಶಾಂತಾರಾಮ ಯಕ್ಷಗಾನ ಪುರಸ್ಕಾರಕ್ಕೆ ಖ್ಯಾತ ಯಕ್ಷಗಾನ ಹಾಸ್ಯ ಕಲಾವಿದ ಮಹಾಬಲೇಶ್ವರ ಭಟ್ ಕ್ಯಾದಗಿ ಆಯ್ಕೆ 

Views: 22

ಕನ್ನಡ ಕರಾವಳಿ ಸುದ್ದಿ: ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನ ‘ಕನ್ನಡ ರಾಜ್ಯೋತ್ಸವ’ ಸಮಾರಂಭದಲ್ಲಿ ನವೆಂಬರ್ 1 ರಂದು ನೀಡಲಾಗುತ್ತಿರುವ ‘ಡಾ. ಹೆಚ್. ಶಾಂತಾರಾಮ ಯಕ್ಷಗಾನ ಪುರಸ್ಕಾರ’ಕ್ಕೆ ಖ್ಯಾತ ಯಕ್ಷಗಾನ ಕಲಾವಿದ ಮಹಾಬಲೇಶ್ವರ ಭಟ್ ಕ್ಯಾದಗಿ ಆಯ್ಕೆಯಾಗಿದ್ದಾರೆ.

ಮೂಲತಃ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಕ್ಯಾದಗಿಯವರಾದ ಇವರು ಯಕ್ಷಗಾನದಲ್ಲಿ ಹಾಸ್ಯ ಪಾತ್ರಗಳಲ್ಲಿ ಹೆಚ್ಚು ಮಿಂಚಿದವರು. ಹಾಸ್ಯ ಹಾಗೂ ಸ್ತ್ರೀ ಪಾತ್ರಗಳಲ್ಲೂ ಮೆಚ್ಚುಗೆ ಪಡೆದಿದ್ದಾರೆ. ಹಾಲಾಡಿ, ಸಾಲಿಗ್ರಾಮ, ಪೆರ್ಡೂರು ಮೇಳಗಳ ಕಲಾವಿದರಾಗಿ ತಿರುಗಾಟ ನಡೆಸಿದ್ದಾರೆ.

ನಾಟಕ ರಂಗದಲ್ಲೂ ರಂಗ ತಿರುಗಾಟ ನಡೆಸಿದ್ದಾರೆ. ದೂರದರ್ಶನ ಚಾನೆಲ್‌ಗಳ ಕಾರ್ಯಕ್ರಮಗಳಲ್ಲಿ ಗುರುತಿಸಿಕೊಂಡಿದ್ದಾರೆ. ಧಾರಾವಾಹಿ, ಚಲನಚಿತ್ರಗಳಲ್ಲೂ ಅಭಿನಯಿಸಿದ್ದಾರೆ. ಯಕ್ಷಗಾನ ಕ್ಷೇತ್ರಕ್ಕೆ ಇವರ ಕೊಡುಗೆ ಮಹತ್ವವಾದುದು.

ನವೆಂಬರ್ 1ರಂದು ಮಧ್ಯಾಹ್ನ 2:00ರಿಂದ ನಡೆಯಲಿರುವ ರಾಜ್ಯೋತ್ಸವ ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮದಲ್ಲಿ ಕಾಲೇಜಿನ ಆರ್. ಎನ್. ಶೆಟ್ಟಿ ಸಭಾಂಗಣದಲ್ಲಿ ಇಂದ್ರಾಳಿ ಯಕ್ಷಗಾನ ಕೇಂದ್ರದ ವತಿಯಿಂದ “ಶ್ರೀನಿವಾಸ ಕಲ್ಯಾಣ” ಎಂಬ ಯಕ್ಷಗಾನ ಪ್ರಸಂಗ ನಡೆಯಲಿದೆ. ನಂತರ ಸಭಾ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ ಎಂದು ಕಾಲೇಜಿನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇಂದ್ರಾಳಿ ಯಕ್ಷಗಾನ ಕೇಂದ್ರದ ಅಧ್ಯಕ್ಷ ಕಿಶನ್ ಹೆಗಡೆ ಪಳ್ಳಿ ಅಭಿನಂದನಾ ನುಡಿಗಳನ್ನಾಡಲಿದ್ದಾರೆ. ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭಾಕರಾಚಾರಿ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ಸರೋಜ ಎಂ., ಕಾಲೇಜಿನ ಲಲಿತ ಕಲಾ ಸಂಘದ ಸಂಚಾಲಕ ಶಶಾಂಕ್ ಪಟೇಲ್ ಉಪಸ್ಥಿತರಿರುತ್ತಾರೆ. ನಂತರ ಪ್ರಸಿದ್ಧ ಕಲಾವಿದರಿಂದ ಯಕ್ಷಗಾನ ತಾಳಮದ್ದಳೆ ನಡೆಯಲಿದೆ ಎಂದು ಕಾಲೇಜಿನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Back to top button
error: Content is protected !!