ಶಿಕ್ಷಣ

ಹೆಮ್ಮಾಡಿ ಜನತಾ ಪಿಯು ಕಾಲೇಜಿನಲ್ಲಿ ‘ಖೇಲೋ ಜನತಾ – 2026’ ವಾರ್ಷಿಕ ಕ್ರೀಡಾಕೂಟ ಸಂಭ್ರಮ

Views: 10

ಕನ್ನಡ ಕರಾವಳಿ ಸುದ್ದಿ: ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ, ಜನತಾ ನ್ಯೂ ಇಂಗ್ಲೀಷ್ ಸ್ಕೂಲ್ ಕಿರೀಮಂಜೇಶ್ವರ ಇವರ ಸಂಯುಕ್ತ ಆಸರೆಯಲ್ಲಿ ‘ಖೇಲೋ ಜನತಾ – ವಾರ್ಷಿಕ ಕ್ರೀಡಾಕೂಟ 2026’ ಶುಕ್ರವಾರ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಗಣೇಶ್ ಮೊಗವೀರ ಮಾತನಾಡಿ, ನಮ್ಮ ಸಂಸ್ಥೆಯಲ್ಲಿ ಕ್ರೀಡಾ ಸಾಧನೆಗೈದ ಅನೇಕ ಪ್ರತಿಭಾನ್ವಿತ ವಿದ್ಯಾರ್ಥಿಗಳಿದ್ದಾರೆ. ವಿದ್ಯಾರ್ಥಿಗಳ ಕ್ರೀಡಾ ಪ್ರಗತಿಗೆ ಅನುಕೂಲವಾಗುವ ನಿಟ್ಟಿನಲ್ಲಿ ವಾರ್ಷಿಕ ಕ್ರೀಡಾಕೂಟ ಹಮ್ಮಿಕೊಂಡಿದ್ದೇವೆ. ವಿದ್ಯಾರ್ಥಿಗಳು ಕ್ರೀಡಾ ಸ್ಫೂರ್ತಿಯಿಂದ ತೊಡಗಿಸಿಕೊಳ್ಳಿ ಎಂದು ಶುಭ ಹಾರೈಸಿದರು.

ಪಥ ಸಂಚಲನದ ಗೌರವ ವಂದನೆ ಸ್ವೀಕರಿಸಿದ ಬೈಂದೂರು ತಾಲ್ಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಫದ ಅಧ್ಯಕ್ಷರಾಗಿರುವ ಅರುಣ್ ಕುಮಾರ್ ಶೆಟ್ಟಿ ಮಾತನಾಡಿ, ದೈಹಿಕ ಮತ್ತು ಮಾನಸಿಕ ಆರೋಗ್ಯ ಚೈತನ್ಯವಾಗಿ ಇರಬೇಕಾದರೆ ಕ್ರೀಡೆಯಲ್ಲಿ ಭಾಗವಹಿಸುವಿಕೆ ಮುಖ್ಯ . ಕ್ರೀಡಾಪಟು ಜೀವನದಲ್ಲಿ ಎಂದಿಗೂ ಸೋಲುವುದಿಲ್ಲ. ಎಲ್ಲ ವಿದ್ಯಾರ್ಥಿಗಳು ಕ್ರೀಡಾ ಸ್ಫೂರ್ತಿಯಿಂದ ಭಾಗವಹಿಸಿ ಎಂದು ಶುಭ ಹಾರೈಸಿದರು.

ಪತ್ರಕರ್ತರಾದ ಅರುಣ್ ಕುಮಾರ್ ಶಿರೂರು ಕ್ರೀಡಾ ಜ್ಯೋತಿ ಬೆಳಗಿಸಿ ಮಾತನಾಡಿ ಜನತಾ ವಿದ್ಯಾ ಸಂಸ್ಥೆ ಶೈಕ್ಷಣಿಕ ಮತ್ತು ಕ್ರೀಡಾ ರಂಗದಲ್ಲಿ ವಿಶೇಷ ಸಾಧನೆಮಾಡಿದೆ.ವಿದ್ಯಾರ್ಥಿಗಳು ಇಲ್ಲಿ ಸಿಗುವ ಸವಲತ್ತುಗಳನ್ನು ಉಪಯೋಗಿಸಿಕೊಂಡು ಉತ್ತಮ ವ್ಯಕ್ತಿಗಳಾಗಿ ಎಂದು ಶುಭ ಹಾರೈಸಿದರು

ಕೆ. ಪಿ. ಎಸ್ ವಂಡ್ಸೆ ನೆಂಪು ಇಲ್ಲಿಯ ದೈಹಿಕ ಶಿಕ್ಷಣ ಶಿಕ್ಷಕರಾದ ಚಂದ್ರಶೇಖರ್ ಶೆಟ್ಟಿ ದ್ವಜಾರೋಹಣ ನೆರವೇರಿಸಿ ಮಾತನಾಡಿ ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲಿ ಸದಾ ತೊಡಗಿಸಿಕೊಂಡರೆ ಉತ್ತಮ ಆರೋಗ್ಯ ಕಂಡು ಕೊಳ್ಳಬಹುದು ಎಂದರು.

ಕಾರ್ಯಕ್ರಮದಲ್ಲಿ ಹೆಮ್ಮಾಡಿಯ ಜನತಾ ಪ್ರೌಢಶಾಲೆಯ ಪ್ರಭಾರ ಮುಖ್ಯ ಶಿಕ್ಷಕರಾದ ಜಗದೀಶ ಶೆಟ್ಟಿ, ಕಾಲೇಜಿನ ಉಪ ಪ್ರಾಂಶುಪಾಲರಾದ ರಮೇಶ್ ಪೂಜಾರಿ ಉಪಸ್ಥಿತರಿದ್ದರು

ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ಕಿರೀಮಂಜೇಶ್ವರ ಇಲ್ಲಿಯ ಮುಖ್ಯ ಶಿಕ್ಷಕಿ ದೀಪಿಕಾ ಆಚಾರ್ಯ ಸ್ವಾಗತಿಸಿ,ಶಿಕ್ಷಕಿ ಶಾಂಭವಿ ಪಥ ಸಂಚಲನ ನಿರೂಪಿಸಿ, ದೈಹಿಕ ಶಿಕ್ಷಣ ಶಿಕ್ಷಕರಾದ ವಿಶ್ವನಾಥ್ ವಂದಿಸಿ. ಉಪನ್ಯಾಸರಾದ ಉದಯ ನಾಯ್ಕ್ ಕಾರ್ಯಕ್ರಮ ನಿರೂಪಿಸಿದರು.

Related Articles

Back to top button
error: Content is protected !!