ರಾಜಕೀಯ

ಮಾಜಿ ಮುಖ್ಯಮಂತ್ರಿ ಜಯಲಲಿತಾ ಆಪ್ತ ಶಶಿಕಲಾ ಉಚ್ಚಾಟನೆ

Views: 0

ಕನ್ನಡ ಕರಾವಳಿ ಸುದ್ದಿ: ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ನಿಧನದ ಬಳಿಕ ಎಐಎಡಿಎಂಕೆ ನಾಯಕರು ವಿವಿಧ ಪಕ್ಷಗಳಲ್ಲಿ ಗುರುತಿಸಿಕೊಂಡಿದ್ದು, ಇದೀಗ ಜಯಲಲಿತಾ ಆಪ್ತ ಶಶಿಕಲಾ ಅವರನ್ನೂ ಕೂಡ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ತಿಳಿದುಬಂದಿದೆ.

ಪಕ್ಷದ ಸಂಘಟನಾ ಚಟುವಟಿಕೆಗಳಿಗೆ ಯಾವುದೇ ಕೊಡುಗೆ ನೀಡುತ್ತಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ಎಐಪಿಟಿಎಂಎಂಕೆ (ಆಲ್ ಇಂಡಿಯಾ ಪುರುಚ್ಚಿ ತಲೈವರ್ ಮಕ್ಕಳ್ ಮುನ್ನೇತ್ರ ಕಳಗಂ) ಪ್ರಧಾನ ಕಾರ್ಯದರ್ಶಿ ವಿ.ಕೆ. ಶಶಿಕಲಾ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಪಕ್ಷದ ಅಧ್ಯಕ್ಷ ಪಿ. ಚಕ್ರವರ್ತಿ ಘೋಷಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಚಕ್ರವರ್ತಿ, ಶಶಿಕಲಾ ಅವರು ಪಕ್ಷವನ್ನು ಬೆಳೆಸುವ ನಿಟ್ಟಿನಲ್ಲಿ ಯಾವುದೇ ಪ್ರಯತ್ನ ಮಾಡುತ್ತಿಲ್ಲ ಎಂದು ಆರೋಪಿಸಿದರು. ವಿಧಾನಸಭೆ ಚುನಾವಣೆ ಮುಗಿದ ಬಳಿಕ ಅವರನ್ನು ಭೇಟಿಯಾಗಲು ಹಲವು ಬಾರಿ ಪ್ರಯತ್ನಿಸಿದರೂ ಸಾಧ್ಯವಾಗಿಲ್ಲ ಎಂದು ತಿಳಿಸಿದರು.

Related Articles

Back to top button
error: Content is protected !!