ಯುವಜನ

ಉಡುಪಿ ಜಿಲ್ಲಾಸ್ಪತ್ರೆಯ ಶೌಚಾಲಯದಲ್ಲಿ ಯುವಕ ಆತ್ಮಹತ್ಯೆ

Views: 25

ಕನ್ನಡ ಕರಾವಳಿ ಸುದ್ದಿ: ಉಡುಪಿ ಜಿಲ್ಲಾಸ್ಪತ್ರೆಯ ಶೌಚಾಲಯದಲ್ಲಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅ.30 ರಂದು ಸಂಜೆ ಸಂಭವಿಸಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕ ಹಿರಿಯಡ್ಕದ ಪೆರ್ಡೂರು ಪಾಡಿಗಾರ ನಿವಾಸಿ ಪ್ರದೀಪ್ ಪೂಜಾರಿ (28) ಎಂದು ತಿಳಿದು ಬಂದಿದೆ.

ಈತ ಯುವತಿಯ ಮಾನಭಂಗಕ್ಕೆ ಯತ್ನಿಸಿ ಸಾರ್ವಜನಿಕರಿಂದ ಥಳಿತಕ್ಕೊಳಗಾಗಿದ್ದ ಆರೋಪಿ ಎಂದು ತಿಳಿಯಲಾಗಿದೆ. ಗಾಯಗೊಂಡಿದ್ದ ಆರೋಪಿಯನ್ನು ಪೊಲೀಸರು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು.

ಚಿಕಿತ್ಸೆ ಪಡೆಯುತ್ತಿದ್ದ ಯುವಕ ವಾರ್ಡ್ ನಲ್ಲಿ ಶೌಚ ಮಾಡಲೆಂದು ಶೌಚಾಲಯಕ್ಕೆ ತೆರಳಿದವನು ತನ್ನ ನೈಟ್ ಪ್ಯಾಂಟ್ ನ ದಾರವನ್ನು ಕಿಟಕಿಗೆ ಕಟ್ಟಿ ಅದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಶವವನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ತನಿಖೆ ಮುಂದುವರಿದಿದೆ.

Related Articles

Back to top button
error: Content is protected !!