ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ
Views: 0
ಕನ್ನಡ ಕರಾವಳಿ ಸುದ್ದಿ: ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನಲ್ಲಿ 71ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ದೀಪಿಕಾ ಆಚಾರ್ಯ ವಹಿಸಿದ್ದರು. ಕನ್ನಡ ನಾಡು, ನುಡಿ, ನೆಲ, ಜಲ ಹಾಗೂ ಕನ್ನಡ ಭಾಷೆಯ ಶ್ರೀಮಂತ ಪರಂಪರೆಯನ್ನು ಸ್ಮರಿಸುವ ಉದ್ದೇಶದಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ಕನ್ನಡ ಶಿಕ್ಷಕ ಮಹಾದೇವ ಅವರು ಕನ್ನಡ ಭಾಷೆಯ ಇತಿಹಾಸ, ಕರ್ನಾಟಕದ ಏಕೀಕರಣದ ಮಹತ್ವ ಹಾಗೂ ಕನ್ನಡಿಗರ ಅಭಿಮಾನ ಮತ್ತು ಸ್ವಾಭಿಮಾನದ ಕುರಿತು ಭಾಷಣ ಮಾಡಿದರು. ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವಲ್ಲಿ ಪ್ರತಿಯೊಬ್ಬರ ಜವಾಬ್ದಾರಿಯನ್ನು ತಿಳಿಸಿದರು.
ಶಾಲಾ ಸಂಯೋಜಕರಾದ ಸುಬ್ರಮಣ್ಯ ಮಾರಾಟಿ ಹಾಗೂ ಸಾಂಸ್ಕೃತಿಕ ವಿಭಾಗದ ಸಂಯೋಜಕರಾದ ರಾಘವೇಂದ್ರ ಬಿಲ್ಲವ, ಬೋಧಕ – ಬೋಧಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕನ್ನಡ ಶಿಕ್ಷಕಿ ಶ್ವೇತಾ ಅವರು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರೂಪಿಸಿದರು. ಕನ್ನಡ ಶಿಕ್ಷಕಿ ಸುಜಾತಾ ಅವರು ಸ್ವಾಗತಿಸಿ, ಕೊನೆಯಲ್ಲಿ ವಂದನಾರ್ಪಣೆ ಸಲ್ಲಿಸಿದರು.
ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಸಹಭಾಗಿತ್ವದಲ್ಲಿ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮವು ಕನ್ನಡಾಭಿಮಾನ ಮತ್ತು ನಾಡುನುಡಿಯ ಮೇಲಿನ ಗೌರವವನ್ನು ಹೆಚ್ಚಿಸುವಲ್ಲಿ ಯಶಸ್ವಿಯಾಯಿತು.






