ದೇವಾಲಯಕ್ಕೆ ನುಗ್ಗಿ ನವಗ್ರಹದ ವಿಗ್ರಹಗಳ ಧ್ವಂಸ, ಆರೋಪಿ ಬಂಧನ
Views: 145
ಕನ್ನಡ ಕರಾವಳಿ ಸುದ್ದಿ: ಮದ್ಯದ ಅಮಲಿನಲ್ಲಿ ವ್ಯಕ್ತಿಯೊಬ್ಬ ದೇವಾಲಯದಲ್ಲಿದ್ದ ನವಗ್ರಹದ ಒಂಬತ್ತು ವಿಗ್ರಹಗಳನ್ನು ಧ್ವಂಸಗೊಳಿಸಿರುವ ಘಟನೆ ನಡೆದಿದೆ. ಬೆಳಿಗ್ಗೆ ದೇವಾಲಯಕ್ಕೆ ಬಂದ ಅರ್ಚಕರು ವಿಗ್ರಹಗಳು ಹಾನಿಗೊಳಗಾಗಿರುವುದನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನೆಯಿಂದ ಸ್ಥಳೀಯರಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ರಾಮನಗರದ ಕೆಂಪೇಗೌಡ ಸರ್ಕಲ್ ಬಳಿ ಇರುವ ಪ್ರಸಿದ್ಧ ಲಕ್ಷ್ಮೀ ವೆಂಕಟೇಶ್ವರ ದೇವಾಲಯದಲ್ಲಿ ಈ ಕೃತ್ಯ ನಡೆದಿದೆ. ನವಗ್ರಹ ಕಟ್ಟೆಯ ಮೇಲಿದ್ದ ಒಂಬತ್ತೂ ವಿಗ್ರಹಗಳಿಗೆ ಹಾನಿ ಮಾಡಲಾಗಿದೆ. ಮಾಹಿತಿ ತಿಳಿದ ತಕ್ಷಣ ಐಜೂರು ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ದೇವಾಲಯ ಮತ್ತು ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ ಪೊಲೀಸರು ಕೃತ್ಯ ಎಸಗಿದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಬಿಹಾರ ಮೂಲದ ಮೊಹಮ್ಮದ್ ಸಮೀಮ್ ಬಂಧಿತ ಆರೋಪಿ. ರಾಮನಗರದಲ್ಲಿ ಗಾರೆ ಕೆಲಸ ಮಾಡಿಕೊಂಡಿದ್ದ ಸಮೀಮ್, ರಾತ್ರಿ ಕಂಠಪೂರ್ತಿ ಮದ್ಯ ಸೇವಿಸಿ ವಿಗ್ರಹಗಳನ್ನು ಧ್ವಂಸಗೊಳಿಸಿರುವುದು ಸಿಸಿಟಿವಿ ದೃಶ್ಯಗಳಲ್ಲಿ ಸೆರೆಯಾಗಿದೆ.






