ಶ್ರೀನಿಧಿ ಜೊತೆ ನಿಶ್ಚಿತಾರ್ಥ ನೆರವೇರಿಸಿಕೊಂಡ ಶಾಸಕ
Views: 64
ಕನ್ನಡ ಕರಾವಳಿ ಸುದ್ದಿ: ನಂಜನಗೂಡು ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್ ಅವರು ತಾವು ಪ್ರೀತಿಸುತ್ತಿದ್ದ ಶ್ರೀನಿಧಿ ಅವರೊಂದಿಗೆ ಅದ್ಧೂರಿಯಾಗಿ ನಿಶ್ಚಿತಾರ್ಥ ನೆರವೇರಿಸಿಕೊಂಡಿದ್ದಾರೆ.
ಶಾಸಕ ದರ್ಶನ್ ಧ್ರುವನಾರಾಯಣ್ ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ಪ್ರೀತಿಸುತ್ತಿದ್ದ ಡಾ. ಶ್ರೀನಿಧಿ ಅವರೊಂದಿಗೆ ಕುಟುಂಬದ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್ ಹಾಗೂ ಡಾ. ಶ್ರೀನಿಧಿ ಅವರ ನಿಶ್ಚಿತಾರ್ಥ ಸಮಾರಂಭ ಸಂಭ್ರಮ ಸಡಗರದಿಂದ ನೆರವೇರಿದೆ. ಕೆ.ಆರ್.ಪೇಟೆಯವರಾದ ಡಾ. ಶ್ರೀನಿಧಿ ಅವರೊಂದಿಗೆ ದರ್ಶನ್ ಅವರ ಪ್ರೇಮಾಂಕುರವಾಗಿದ್ದು, ಇದೀಗ ಎರಡೂ ಕುಟುಂಬಗಳ ಒಪ್ಪಿಗೆ ಹಾಗೂ ಆಶೀರ್ವಾದದೊಂದಿಗೆ ಜೋಡಿ ನಿಶ್ಚಿತಾರ್ಥ ಮಾಡಿಕೊಂಡಿದೆ.
ಈ ಜೋಡಿ ಕಳೆದ ನಾಲ್ಕು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಇದೀಗ ತಮ್ಮ ಪ್ರೀತಿಗೆ ಕುಟುಂಬದ ಸಮ್ಮತಿಯ ಮುದ್ರೆ ಒತ್ತಿಸಿಕೊಂಡು ಹೊಸ ಜೀವನಕ್ಕೆ ಕಾಲಿಡಲು ಮುಂದಾಗಿದ್ದಾರೆ. ನಿಶ್ಚಿತಾರ್ಥ ಸಮಾರಂಭದಲ್ಲಿ ಎರಡೂ ಕುಟುಂಬಗಳ ಸದಸ್ಯರು ಭಾಗವಹಿಸಿ ನವಜೋಡಿಗೆ ಶುಭ ಹಾರೈಸಿದ್ದಾರೆ.
ನಿಶ್ಚಿತಾರ್ಥದ ಬೆನ್ನಲ್ಲೇ ದರ್ಶನ್ ಧ್ರುವನಾರಾಯಣ್ ಹಾಗೂ ಡಾ. ಶ್ರೀನಿಧಿ ಅವರ ಕುಟುಂಬಗಳಲ್ಲಿ ಮದುವೆ ಸಂಭ್ರಮ ಮನೆಮಾಡಿದೆ. ನವ ಜೋಡಿಗೆ ಶುಭವಾಗಲೆಂದು ಕುಟುಂಬಸ್ಥರು ಹಾಗೂ ಆಪ್ತರು ಹಾರೈಸಿದ್ದಾರೆ.






