ಡಿಗ್ರಿ ಆದವರಿಗೆ ರೈಲ್ವೆ ನೇಮಕಾತಿ ಮಂಡಳಿಯಿಂದ 1,215 ಸ್ಟೇಷನ್ ಮಾಸ್ಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
Views: 29
ಕನ್ನಡ ಕರಾವಳಿ ಸುದ್ದಿ: ಖಾಲಿ ಇರುವ ಬರೋಬ್ಬರಿ 1,215 ಹುದ್ದೆಗಳ ಭರ್ತಿಗೆ ರೈಲ್ವೆ ಸಚಿವಾಲಯದ ರೈಲ್ವೆ ನೇಮಕಾತಿ ಮಂಡಳಿ ಅರ್ಜಿ ಆಹ್ವಾನಿಸಿದೆ.
ಸ್ಟೇಷನ್ ಮಾಸ್ಟರ್ ಹುದ್ದೆ ಇದಾಗಿದ್ದು, ಪದವಿ ವಿದ್ಯಾರ್ಹತೆಯವರು ಅರ್ಜಿ ಸಲ್ಲಿಸಬಹುದು. ಬೆಂಗಳೂರು ವಲಯದಲ್ಲಿ 102 ಹುದ್ದೆಗಳಿವೆ ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದ್ದು,
ಕೊನೆಯ ದಿನ ನವೆಂಬರ್ 25
ವಿದ್ಯಾರ್ಹತೆ ಮತ್ತು ವಯೋಮಿತಿ
ಈ ನೇಮಕಾತಿಯನ್ನ ರೈಲ್ವೆ ನೇಮಕಾತಿ ಮಂಡಳಿ ನಡೆಸುತ್ತಿದೆ. ಸ್ಟೇಷನ್ ಮಾಸ್ಟರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳು ಅಖಿಲ ಭಾರತ ಮಟ್ಟದಲ್ಲಿ ಉದ್ಯೋಗ ಪಡೆಯಲು ಅವಕಾಶ ಹೊಂದಿರುತ್ತಾರೆ. ಹುದ್ದೆಗಳ ಸಂಖ್ಯೆ 1,215 ಆಗಿದ್ದು, ವೇತನ ಶ್ರೇಣಿ ಪೇ ಲೆವೆಲ್ 6ರ ಅಡಿಯಲ್ಲಿ ತಿಂಗಳಿಗೆ ₹35,400 ಎಂದು ತಿಳಿಸಲಾಗಿದೆ.
ಸ್ಟೇಷನ್ ಮಾಸ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪೂರ್ಣಗೊಳಿಸಿರಬೇಕು. ಬಿಕಾಂ, ಬಿಇ ಅಥವಾ ಬಿಟೆಕ್ ಸೇರಿದಂತೆ ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಅರ್ಹತಾ ಮಾನದಂಡಗಳಿಗೆ ಅನುಗುಣವಾಗಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 22 ವರ್ಷ ಮತ್ತು ಗರಿಷ್ಠ ವಯಸ್ಸು 33 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10ರಿಂದ 15 ವರ್ಷಗಳ ರಿಯಾಯಿತಿ ಇದೆ.
ಅರ್ಜಿ ಶುಲ್ಕ
ಅರ್ಜಿ ಶುಲ್ಕವಾಗಿ ಎಸ್‌ಸಿ, ಎಸ್‌ಟಿ, ಒಬಿಸಿ ಅಭ್ಯರ್ಥಿಗಳು, ಮಾಜಿ ಯೋಧರು, ಅಲ್ಪ ಸಂಖ್ಯಾತರು, ಮಹಿಳೆಯರು ಮತ್ತು ತೃತೀಯ ಲಿಂಗಿಗಳು 250 ರೂಪಾಯಿ ಮತ್ತು ಉಳಿದೆಲ್ಲ ಅಭ್ಯರ್ಥಿಗಳು 500 ರೂಪಾಯಿ ಪಾವತಿಸಬೇಕು. ಪಾವತಿ ವಿಧಾನ: ಆನ್‌ಲೈನ್.
ಆಯ್ಕೆ ವಿಧಾನ ಮತ್ತು ಮಾಸಿಕ ವೇತನ
ಮೊದಲ ಮತ್ತು 2ನೇ ಹಂತದ ಸಿಬಿಟಿ, ದಾಖಲಾತಿ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 35,400 ರುಪಾಯಿ ಮಾಸಿಕ ವೇತನ ದೊರೆಯಲಿದೆ. ಮೊದಲ ಹಂತದ ಸಿಬಿಟಿಯಲ್ಲಿ 100 ಪ್ರಶ್ನೆಗಳಿರಲಿದ್ದು, ಪ್ರತಿ ಪ್ರಶ್ನೆಗೆ 1 ಅಂಕಗಳಿವೆ. ಬೇಸಿಕ್ ಸೈನ್ಸ್, ಗಣಿತ ಮತ್ತು ಅನಾಲಿಟಿಕಲ್ ಮತ್ತು ಅನಾಲಿಟಿಕಲ್ ಕ್ಯಾಪಾಬಿಲಿಟಿ 60, ಲಾಜಿಕಲ್ ಕ್ಯಾಪಾಬಿಲಿಟಿ 20, ಮೆಂಟಲ್ ರೀಸನಿಂಗ್ 20 ಪ್ರಶ್ನೆಗಳಿರುತ್ತವೆ.
ಪರೀಕ್ಷೆಯ ಅವಧಿ: 120 ನಿಮಿಷ. 2ನೇ ಹಂತದಲ್ಲಿ ಕಂಪ್ಯೂಟರ್ ಬೇಸ್ಡ್ ಆಪ್ಟಿಟ್ಯೂಡ್ ಟೆಸ್ಟ್ ಇರಲಿದೆ. ಗಮನಿಸಿ ಪ್ರತಿ ತಪ್ಪು ಉತ್ತರಕ್ಕೆ ನೆಗೆಟಿವ್ ಅಂಕಗಳಿವೆ. ಹೀಗಾಗಿ ಸರಿಯಾಗಿ ಯೋಚಿಸಿ ಉತ್ತರಿಸಿ.
ಅರ್ಜಿ ಸಲ್ಲಿಸುವ ವಿಧಾನ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
(https://www.rrbapply.gov.in/#/auth/home)






