ಇತರೆ
ಬಾಕಿ ವೇತನಕ್ಕಾಗಿ ಮೈ ಮೇಲೆ ಮಲ ಸುರಿದುಕೊಂಡು ಪ್ರತಿಭಟನೆ

Views: 2
14 ತಿಂಗಳ ಬಾಕಿ ವೇತನಕ್ಕೆ ಅಗ್ರಹಿಸಿ ಪೌರ ಕಾರ್ಮಿಕರಿಬ್ಬರು ಮೈಮೇಲೆ ಮಲ ಸುರಿದುಕೊಂಡು ಪ್ರತಿಭಟನೆ ಮಾಡಿದ ಘಟನೆ ಕನಕಪುರ ತಾಲೂಕಿನ ಕಸಬಾ ಹೋಬಳಿಯ ಕಲ್ಲಹಳ್ಳಿ ಗ್ರಾಮ ಪಂಚಾಯತ್ ಆವರಣದಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ.
ಪಂಚಾಯಿತಿಯ ಸ್ವಚ್ಛಗಾರರಾಗಿ ಕೆಲಸ ಮಾಡುತ್ತಿದ್ದ ಎನ್ ಸುರೇಶ್ ಮತ್ತು ರಂಗಯ್ಯ ಪ್ರತಿಭಟನೆ ನಡೆಸಿದ ಪೌರಕಾರ್ಮಿಕರು.
ವೇತನ ಬಾಕಿಗಾಗಿ ಪಂಚಾಯಿತಿ ಅಧಿಕಾರಿಗಳನ್ನು ಕೇಳಿ ಬೇಸತ್ತ ಕಾರ್ಮಿಕರು ಮಧ್ಯಾಹ್ನ ಬಿಂದಿಗೆಯಲ್ಲಿ ಮಲ ತೆಗೆದುಕೊಂಡು ಬಂದು ಮೈ ಮೇಲೆ ಸುರಿದುಕೊಂಡಿದ್ದಾರೆ. ಇದಾದ ಸ್ವಲ್ಪ ಹೊತ್ತಿನಲ್ಲಿಯೇ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮತ್ತು ಅಧ್ಯಕ್ಷರು ಇಬ್ಬರ ವೇತನವನ್ನು ಬಿಡುಗಡೆಗೊಳಿಸಿದ್ದಾರೆ.






