ಶಿಕ್ಷಣ

ಎಸ್.ಎಂ.ಎಸ್.ಕಾಲೇಜು ಬ್ರಹ್ಮಾವರ:ರಾಷ್ಟ್ರೀಯ ಸೇವಾ ಯೋಜನೆ ವಿಶೇಷ ಶಿಬಿರ ಉದ್ಘಾಟನೆ

Views: 49

ಕನ್ನಡ ಕರಾವಳಿ ಸುದ್ದಿ: ಎಸ್.ಎಂ.ಎಸ್. ಕಾಲೇಜು, ಬ್ರಹ್ಮಾವರದ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಆಯೋಜಿಸಲಾದ ವಾರ್ಷಿಕ ಏಳು ದಿನಗಳ ವಿಶೇಷ ಶಿಬಿರದ ಉದ್ಘಾಟನಾ ಸಮಾರಂಭವು ನವೆಂಬರ್ 1 ರಂದು ನೀಲಾವರ ಗೋಶಾಲೆಯಲ್ಲಿ ಅರ್ಥಪೂರ್ಣವಾಗಿ ಜರುಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಬರ್ಟ್ ರಾಡ್ರಿಗಸ್ ವಹಿಸಿದ್ದರು.

ಖ್ಯಾತ ಉದ್ಯಮಿಗಳಾದ ಶ್ರೀ ಧನಂಜಯ್ ಅಮೀನ್ ಅವರು ಶಿಬಿರವನ್ನು ಉದ್ಘಾಟಿಸಿದರು. ಉಡುಪಿಯ ಗೋವರ್ಧನಗಿರಿ ಟ್ರಸ್ಟ್‌ನ ವ್ಯವಸ್ಥಾಪಕರಾದ ಶ್ರೀ ನಾಗರಾಜ್ ರಾವ್ ಅವರು ಗೌರವ ಅತಿಥಿಗಳಾಗಿ ಭಾಗವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಉದ್ಯಮಿಗಳಾದ ಶ್ರೀ ಶ್ರೀಧರ್ ಶೆಟ್ಟಿ, ಬ್ರಹ್ಮಾವರದ ಹೋಟೆಲ್ ಉದ್ಯಮಿಗಳಾದ ಶ್ರೀ ಗಣೇಶ್ ಅಡಿಗ ಹಾಗೂ ಕಾಲೇಜು ವಿಭಾಗದ ಕಾರ್ಯದರ್ಶಿಗಳಾದ ಶ್ರೀ ಅಲ್ವಾರಿಸ್ ಡಿಸಿಲ್ವಾ ಉಪಸ್ಥಿತರಿದ್ದರು.

ಕಾರ್ಯಕ್ರಮದ ಆರಂಭದಲ್ಲಿ ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿಗಳಾದ ಶ್ರೀ ಪ್ರಕಾಶ್ ನಾಯಕ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಏಳು ದಿನಗಳ ವಿಶೇಷ ಶಿಬಿರದ ಉದ್ದೇಶ, ಧ್ಯೇಯ ಮತ್ತು ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು. ಶಿಬಿರವು ವಿದ್ಯಾರ್ಥಿಗಳಲ್ಲಿ ಶಿಸ್ತು, ಸೇವಾ ಮನೋಭಾವ, ನಾಯಕತ್ವ ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವ ಮಹತ್ವದ ವೇದಿಕೆಯಾಗಿದೆ ಎಂದು ತಿಳಿಸಿದರು.

ಶಿಬಿರವನ್ನು ಉದ್ಘಾಟಿಸಿದ ಶ್ರೀ ಧನಂಜಯ್ ಅಮೀನ್ ಅವರು ತಮ್ಮ ಉದ್ಘಾಟನಾ ಭಾಷಣದಲ್ಲಿ ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಸಮಾಜಸೇವೆಯಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಗ್ರಾಮೀಣ ಪ್ರದೇಶಗಳ ಸಮಸ್ಯೆಗಳನ್ನು ಅರಿತುಕೊಂಡು ಅವುಗಳ ಪರಿಹಾರಕ್ಕೆ ಕೈಜೋಡಿಸಬೇಕು. ಸೇವಾ ಮನೋಭಾವ ಮತ್ತು ಶ್ರಮದಾನದ ಮೂಲಕ ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡಬೇಕು ಎಂದು ಕರೆ ನೀಡಿದರು.

ಗೌರಧ್ಯಕ್ಷರಾದ ಶ್ರೀ ನಾಗರಾಜ್ ರಾವ್ ಅವರು ನಮ್ಮ ಸಂಸ್ಕೃತಿ ಯನ್ನು ಉಳಿಸಿ ಬೆಳೆಸುವುದೊರೊಂದಿಗೆ ಇಂದಿನ ಯುವ ಪೀಳಿಗೆ ಶಿಸ್ತು ಮತ್ತೆ ಸಂಯವವನ್ನು ತಮ್ಮದಗಿಸಿಕೊಳ್ಳಬೇಕೆಂದು ಶಿಬಿರಾರ್ಥಿಗಳಿಗೆ ಕರೆ ನೀಡಿದರು.ಮುಖ್ಯ ಅತಿಥಿಗಳಾದ ಶ್ರೀ ಶ್ರೀಧರ್ ಶೆಟ್ಟಿ ಅವರು ಮಾತನಾಡಿ, ಎನ್.ಎಸ್. ಎಸ್ ಶಿಬಿರಗಳು ವಿದ್ಯಾರ್ಥಿಗಳಲ್ಲಿ ಸ್ವಾವಲಂಬನೆ, ಸಹಕಾರ, ಶಿಸ್ತು ಮತ್ತು ನಾಯಕತ್ವದ ಗುಣಗಳನ್ನು ಬೆಳೆಸುತ್ತವೆ. ಶಿಬಿರದ ಏಳು ದಿನಗಳನ್ನು ಸದುಪಯೋಗಪಡಿಸಿಕೊಂಡು ಹೊಸ ಅನುಭವಗಳನ್ನು ಪಡೆದುಕೊಳ್ಳಬೇಕು ಹಾಗೂ ಸಮಾಜಕ್ಕೆ ಉಪಯುಕ್ತವಾದ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಹಿತವಚನ ನೀಡಿದರು.

ಅಧ್ಯಕ್ಷೀಯ ಭಾಷಣ ಮಾಡಿದ ಪ್ರಾಂಶುಪಾಲರಾದ ಡಾ. ರಾಬರ್ಟ್ ರಾಡ್ರಿಗಸ್ ಅವರು, ಎನ್.ಎಸ್.ಎಸ್. ವಿಶೇಷ ಶಿಬಿರವು ವಿದ್ಯಾರ್ಥಿಗಳಿಗೆ ಪುಸ್ತಕದ ಜ್ಞಾನದ ಜೊತೆಗೆ ಜೀವನಾನುಭವ ಮತ್ತು ಸಾಮಾಜಿಕ ಅರಿವನ್ನು ನೀಡುತ್ತದೆ. ಶಿಬಿರದಲ್ಲಿ ಭಾಗವಹಿಸುವ ಪ್ರತಿಯೊಬ್ಬ ಸ್ವಯಂಸೇವಕರು ಶಿಸ್ತು, ಸಮಯಪಾಲನೆ ಮತ್ತು ಸೇವಾ ಮನೋಭಾವದಿಂದ ಎಲ್ಲಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿಗಳಾದ ಡಾ. ಮಂಜುನಾಥ್ ಉಡುಪ ಹಾಗೂ ಸಹಾಯಕ ಕಾರ್ಯಕ್ರಮಾಧಿಕಾರಿಗಳಾದ ಕು.ನಕ್ಷಿತಾ ಶೆಟ್ಟಿ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಶ್ರೀ ದಿವ್ಯಜ್ಯೋತಿ ನಿರೂಪಿಸಿದರು. ಕು. ಪ್ರತೀಕ್ಷಾ ಸ್ವಾಗತಿಸಿದರು. ಶ್ರೀ ವಿಖಿಲ್ ವಂದನಾರ್ಪಣೆ ಸಲ್ಲಿಸಿದರು.

ಏಳು ದಿನಗಳ ವಿಶೇಷ ಶಿಬಿರವು ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ, ಸಾಮಾಜಿಕ ಜವಾಬ್ದಾರಿ ಮತ್ತು ಸಾಮೂಹಿಕ ಜೀವನದ ಮೌಲ್ಯಗಳನ್ನು ಬೆಳೆಸುವ ಆಶಯದೊಂದಿಗೆ ಯಶಸ್ವಿಯಾಗಿ ಆರಂಭಗೊಂಡಿತು.

Related Articles

Back to top button
error: Content is protected !!