ಪಡಿತರ ಚೀಟಿದಾರರ ಇ-ಕೆವೈಸಿ ಅವಧಿ ವಿಸ್ತರಣೆ
Views: 7
ಕನ್ನಡ ಕರಾವಳಿ ಸುದ್ದಿ: ರಾಜ್ಯದ ಎಲ್ಲ ಪಡಿತರ ಚೀಟಿದಾರರು ನವೆಂಬರ್ 10ರೊಳಗೆ ಕಡ್ಡಾಯವಾಗಿ ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆ ಸೂಚನೆ ನೀಡಿದೆ.
ಈಗಾಗಲೇ ಇ-ಕೆವೈಸಿ ಮಾಡಿಸಲು ನೀಡಿದ್ದ ಗಡುವನ್ನು ವಿಸ್ತರಿಸಲಾಗಿದ್ದು, ನವೆಂಬರ್ 10ರ ನಂತರ ಯಾವುದೇ ಕಾರಣಕ್ಕೂ ಮತ್ತೊಮ್ಮೆ ಗಡುವು ವಿಸ್ತರಿಸುವುದಿಲ್ಲ ಎಂದು ಇಲಾಖೆ ಸ್ಪಷ್ಟಪಡಿಸಿದೆ. ರಾಜ್ಯದಲ್ಲಿ ಒಟ್ಟು 2,67,64,276 ಪಡಿತರ ಚೀಟಿ ಫಲಾನುಭವಿಗಳು ಮರು ಇ-ಕೆವೈಸಿ ಮಾಡಿಸಬೇಕಿದೆ. ಈ ಪೈಕಿ ನವೆಂಬರ್ 3ರವರೆಗೆ 2,26,30,747 ಮಂದಿ ಪ್ರಕ್ರಿಯೆ ಪೂರ್ಣಗೊಳಿಸಿದ್ದಾರೆ. ಇನ್ನೂ 41,33,529 ಫಲಾನುಭವಿಗಳು ಇ-ಕೆವೈಸಿ ಮಾಡಿಸಬೇಕಿದ್ದು, ನಿಗದಿತ ಅವಧಿಯೊಳಗೆ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಇಲಾಖೆ ಮನವಿ ಮಾಡಿದೆ. ಬಾಕಿ ಉಳಿದಿರುವ ಫಲಾನುಭವಿಗಳು ಅನ್ನ ಸೇವೆ ಮೊಬೈಲ್ ಅಪ್ಲಿಕೇಶನ್ ಮೂಲಕ ಸ್ವತಃ ಇ-ಕೆವೈಸಿ ಮಾಡಿಸಬಹುದು. ಅಥವಾ ಸಮೀಪದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ಆಹಾರ ತಂತ್ರಾಂಶದ ಮೂಲಕವೂ ಪ್ರಕ್ರಿಯೆ ಪೂರ್ಣಗೊಳಿಸಲು ಅವಕಾಶ ಕಲ್ಪಿಸಲಾಗಿದೆ






