ಇತರೆ

ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣ: ಕರ್ತವ್ಯ ಲೋಪವೆಸಗಿದ ಪಿಎಸ್‌ಐ ಸೇರಿದಂತೆ ಇಬ್ಬರು ಸಿಬಂದಿ ವಿರುದ್ಧ ಶಿಸ್ತು ಕ್ರಮ

Views: 0

ಕನ್ನಡ ಕರಾವಳಿ ಸುದ್ದಿ: ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣದ ನಿರ್ವಹಣೆಯಲ್ಲಿ ಕರ್ತವ್ಯ ಲೋಪವೆಸಗಿದ ಪೊಲೀಸ್ ಅಧಿಕಾರಿ ಹಾಗೂ ಸಿಬಂದಿ ವಿರುದ್ಧ ಜಿಲ್ಲಾ ಪೊಲೀಸ್ ಇಲಾಖೆ ಶಿಸ್ತು ಕ್ರಮ ಕೈಗೊಂಡಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳು ನಡೆಸಿದ ವಿಚಾರಣೆಯ ವರದಿಯನ್ನು ಪಶ್ಚಿಮ ವಲಯದ ಡಿಐಜಿಗೆ ಸಲ್ಲಿಸಲಾಗಿದೆ.

ಹಿರಿಯಡಕ ಪೊಲೀಸ್ ಠಾಣೆಯ ಪಿಎಸ್‌ಐ ಅವರನ್ನು ತಾತ್ಕಾಲಿಕವಾಗಿ ಠಾಣೆಯ ಕರ್ತವ್ಯದಿಂದ ತೆಗೆದು ವಿಚಾರಣೆಗೆ ಪಶ್ಚಿಮ ವಲಯ ಡಿಐಜಿ ಕಚೇರಿಗೆ ಹಾಜರಾಗುವಂತೆ ಆದೇಶಿಸಲಾಗಿದೆ. ಅಲ್ಲದೆ ಪಿಎಸ್‌ಐ ವಿರುದ್ಧ ಇಲಾಖಾ ಶಿಸ್ತು ಕ್ರಮ ಆರಂಭಿಸಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿ ಜಿಲ್ಲಾಸ್ಪತ್ರೆಯಲ್ಲಿ ಪ್ರದೀಪ್ ಪೂಜಾರಿಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದ ಸಂದರ್ಭದಲ್ಲಿ ಭದ್ರತಾ ಕರ್ತವ್ಯದಲ್ಲಿದ್ದ ಇಬ್ಬರು ಪೊಲೀಸ್ ಸಿಬಂದಿಯನ್ನು ಅಮಾನತುಗೊಳಿಸಲಾಗಿದೆ.

ಮಹಿಳಾ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಸಲ್ಲಿಸಿದ ವರದಿಯನ್ವಯ ಸಿಬಂದಿ ಕರ್ತವ್ಯದ ವೇಳೆ ನಿರ್ಲಕ್ಷ್ಯ ತೋರಿರುವುದು ಕಂಡುಬಂದಿದ್ದು, ಈ ಹಿನ್ನೆಲೆ ಕ್ರಮ ಕೈಗೊಳ್ಳಲಾಗಿದೆ. ಅವರ ವಿರುದ್ಧ ಮುಂದೆ ಇಲಾಖಾ ಶಿಸ್ತು ಕ್ರಮವನ್ನೂ ಜರಗಿಸಲಾಗುವುದು ಎಂದು ಎಸ್ಪಿ ಸ್ಪಷ್ಟಪಡಿಸಿದ್ದಾರೆ.

ಎಫ್‌ಐಆ‌ರ್ ದಾಖಲಿಸುವ ಬದಲು ಎನ್‌ಸಿ ದಾಖಲು ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಪ್ರದೀಪ್ ಪೂಜಾರಿ ತನ್ನ ಮೇಲೆ ನಡೆದ ಹಲ್ಲೆಯ ಬಗ್ಗೆ ಹಿರಿಯಡಕ ಪೊಲೀಸ್ ಠಾಣೆಗೆ ದೂರು ನೀಡಿದ್ದ ಸಂದರ್ಭ ಠಾಣಾ ಪಿಎಸ್‌ಐ ದೂರಿನ ಮೇರೆಗೆ ಆರೋಪಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸುವ ಬದಲು ಎನ್‌ಸಿ ದಾಖಲಿಸಿಕೊಂಡಿದ್ದರು.ಈ ಸಂಬಂಧ ಪೊಲೀಸ್ ಇಲಾಖೆಯ ಕರ್ತವ್ಯಲೋಪದ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿತ್ತು. ವಿವಿಧ ಸಂಘಟನೆಗಳು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಪೊಲೀಸ್ ಅಧಿಕಾರಿ ಹಾಗೂ ಸಿಬಂದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದವು.

Related Articles

Back to top button
error: Content is protected !!