ಇತರೆ

ಅಪ್ರಾಪ್ತ ವಯಸ್ಕ ಬಾಲಕಿ ಮೇಲೆ ಚಾಕು ತೋರಿಸಿ ಲೈಂಗಿಕ ದೌರ್ಜನ್ಯ: ಹೀನ ಕೃತ್ಯ ಎಸಗಿದ ಆರೋಪಿ ವಿರುದ್ಧ ಆಕ್ರೋಶ

Views: 50

ಕನ್ನಡ ಕರಾವಳಿ ಸುದ್ದಿ:  ಅಪ್ರಾಪ್ತ ವಯಸ್ಕ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಆಕೆಯನ್ನು ಗರ್ಭಿಣಿಯನ್ನಾಗಿಸಿದ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಮುಂಡಗೋಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಇಸ್ಮಾಯಿಲ್ ಹುಲಗೂರ (65) ಬಂಧಿತ ಆರೋಪಿ. ಆರನೇ ತರಗತಿಯ ವಿದ್ಯಾರ್ಥಿನಿ ಸಂತ್ರಸ್ತೆಯಾಗಿದ್ದು, ಆಕೆ ಪರಿಶಿಷ್ಟ ಪಂಗಡಕ್ಕೆ ಸೇರಿದವಳಾಗಿದ್ದು ಬಾಲಕಿಯನ್ನು ಪುಸಲಾಯಿಸಿ, ಚಾಕು ತೋರಿಸಿ ಲೈಗಿಂಕ ದೌರ್ಜನ್ಯ ಎಸಗಿದ್ದಾನೆ. ಮನೆಯವರಿಗೆ ಹೇಳಿದರೆ ಜೀವ ತೆಗೆಯುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ತಿಳಿದುಬಂದಿದೆ.

ಸಂತ್ರಸ್ತೆ ಈಗ ಒಂಬತ್ತು ತಿಂಗಳ ಗರ್ಭಿಣಿಯಾಗಿದ್ದು, ಇನ್ನೊಂದು ವಾರದಲ್ಲಿ ಹೆರಿಗೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಮಗಳು ಗರ್ಭಿಣಿಯಾಗಿರುವ ಸಂಗತಿ ಮನೆಯವರಿಗೆ ತಿಳಿದೇ ಇರಲಿಲ್ಲ. ಬಾಲಕಿ ಹೊಟ್ಟೆನೋವಿನಿಂದ ಬಳಲುತ್ತಿದ್ದಾಗ ವಿಷಯ ಬಹಿರಂಗವಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು, ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂಘಟನೆಗಳ ಆಕ್ರೋಶ:

ಘಟನೆ ಬೆಳಕಿಗೆ ಬರುತ್ತಿದ್ದಂತೆ ದಲಿತ ಹಾಗೂ ಹಿಂದೂ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ಇಂತಹ ಹೀನ ಕೃತ್ಯ ಎಸಗಿದ ಆರೋಪಿಗೆ ಮರಣದಂಡನೆ ವಿಧಿಸಬೇಕೆಂದು ಆಗ್ರಹಿಸಿವೆ.

Related Articles

Back to top button
error: Content is protected !!