ಇತರೆ

ಶಾಲೆಯಲ್ಲಿ ಶಿಕ್ಷಕ–ಶಿಕ್ಷಕಿಯ ಅಸಭ್ಯ ವರ್ತನೆ ವೈರಲ್:  ಪೋಷಕರು, ಗ್ರಾಮಸ್ಥರಿಂದ ತೀವ್ರ ಆಕ್ರೋಶ 

Views: 50

ಕನ್ನಡ ಕರಾವಳಿ ಸುದ್ದಿ: ಉತ್ತರ ಪ್ರದೇಶದ ಕನ್ನೌಜ್ ಜಿಲ್ಲೆಯ ಸೌರಿಖ್ ಪ್ರದೇಶದ ಬಝೇಡಿ ಕಾಂಪೋಸಿಟ್ ಶಾಲೆಯಲ್ಲಿ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಶಾಲೆಯೊಳಗೆ ಶಿಕ್ಷಕ ಅವಧೇಶ್ ಕುಮಾರ್ ಹಾಗೂ ಶಿಕ್ಷಕಿ ಪೂಜಾ ರಾಣಿ ಪರಸ್ಪರ ಚುಂಬಿಸುತ್ತಿರುವ ದೃಶ್ಯಗಳು ಹಿಡನ್ ಕ್ಯಾಮೆರಾದಲ್ಲಿ ಸೆರೆಯಾಗಿವೆ ಎನ್ನಲಾಗಿದೆ.

ಶಾಲೆಯ ಆವರಣದಲ್ಲೇ ನಡೆದಿರುವ ಈ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪೋಷಕರು ಹಾಗೂ ಗ್ರಾಮಸ್ಥರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಮಕ್ಕಳಿರುವ ಶಾಲೆಯಲ್ಲಿ ಇಂತಹ ವರ್ತನೆ ನಡೆದಿರುವುದು ಶಿಕ್ಷಣ ಕ್ಷೇತ್ರದ ಘನತೆಗೆ ಧಕ್ಕೆ ತಂದಿದೆ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮೂಲಗಳ ಪ್ರಕಾರ, ಶಿಕ್ಷಕನ ಪತ್ನಿಯೇ ಈ ದೃಶ್ಯಗಳನ್ನು ಕ್ಯಾಮೆರಾದಲ್ಲಿ ಸೆರೆಹಿಡಿಯಲು ವ್ಯವಸ್ಥೆ ಮಾಡಿದ್ದರು ಎನ್ನಲಾಗುತ್ತಿದೆ. ಅವರು ಔರಯ್ಯ ಜಿಲ್ಲೆಯಲ್ಲಿ ಗ್ರಾಮೀಣಾಭಿವೃದ್ಧಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂಬ ಮಾಹಿತಿಯೂ ಹರಿದಾಡುತ್ತಿದೆ.

ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆ ನಡೆಯುತ್ತಿದ್ದು, ಸಂಬಂಧಪಟ್ಟ ಶಿಕ್ಷಣ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

 

Related Articles

Back to top button
error: Content is protected !!