ಶಿಕ್ಷಣ

ಕಲೆಯಿಂದ ಜೀವನ ಕಟ್ಟಿಕೊಳ್ಳಲು ಸಾಧ್ಯ -ಜನತಾ ಶನಯ ವಾರ್ಷಿಕ ಸಂಭ್ರಮದಲ್ಲಿ ಹಾಸ್ಯನಟ ಟೆನ್ನಿಸ್ ಕೃಷ್ಣ ಅಭಿಮತ

ಪ್ರತಿಯೊಬ್ಬರಿಗೂ ಜೀವನದಲ್ಲಿ ಹಲವಾರು ಅವಕಾಶಗಳು ಸಿಗುತ್ತದೆ, ಸಿಕ್ಕಿದ ಅವಕಾಶ ಸದುಪಯೋಗ ಮಾಡಿಕೊಂಡರೆ ಯಶಸ್ಸು ಗಳಿಸಲು ಸಾಧ್ಯ----ಹಾಸ್ಯನಟ ಟೆನ್ನಿಸ್ ಕೃಷ್ಣ

Views: 11

ಕನ್ನಡ ಕರಾವಳಿ ಸುದ್ದಿ: ಹೆಮ್ಮಾಡಿ -ಪ್ರತಿಯೊಬ್ಬರಿಗೂ ಜೀವನದಲ್ಲಿ ಹಲವಾರು ಅವಕಾಶಗಳು ಸಿಗುತ್ತದೆ, ಸಿಕ್ಕಿದ ಅವಕಾಶ ಸದುಪಯೋಗ ಮಾಡಿಕೊಂಡರೆ ಯಶಸ್ಸು ಗಳಿಸಲು ಸಾಧ್ಯ, ನನ್ನ ಜೀವನದಲ್ಲಿ ನಾನು ಹಂತ ಹಂತವಾಗಿ ಮೇಲೆ ಬಂದವನು ಇಂದು ನನಗೆ ಕಲೆ ಜೀವನ ನಡೆಸಲು ಅವಕಾಶ ಮಾಡಿಕೊಟ್ಟಿದೆ ಎಂದು ಕನ್ನಡ ಚಿತ್ರರಂಗದ ಹಾಸ್ಯನಟ ಟೆನ್ನಿಸ್ ಕೃಷ್ಣ ಅಭಿಪ್ರಾಯಿಸಿದರು.

ಹೆಮ್ಮಾಡಿ ಜನತಾ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಜನತಾ ಶನಯ ವಾರ್ಷಿಕ ಸಂಭ್ರಮದ ವಿಶೇಷ ಅತಿಥಿಯಾಗಿ ಮಾತನಾಡಿದ ಅವರು ಚಿತ್ರ ರಂಗದ ಏಳು ಬೀಳು, ಆಧುನಿಕ ಚಿತ್ರರಂಗದ ಅವಕಾಶ ಲಭ್ಯತೆಗಳ ಕುರಿತು ಮಾತನಾಡಿ ಹಾಸ್ಯ ಚಟಾಕಿಗಳನ್ನು ಹಾರಿಸಿದರು.

ಮಾಜಿ ಶಾಸಕ ಗೋಪಾಲ ಪೂಜಾರಿ ಮಾತನಾಡಿ,ಇಂದು ಜನತಾ ಹಲವು ಸಾಧನೆಗಳ ಮೂಲಕ ಶೈಕ್ಷಣಿಕ ಕ್ರಾಂತಿ ಮಾಡಿದೆ, ವಿದ್ಯಾರ್ಥಿಗಳು ಇಲ್ಲಿ ಸಿಗುವ ಸೌಲಭ್ಯಗಳ ಸದುಪಯೋಗ ಪಡೆದು ಕೊಳ್ಳಬೇಕು ಎಂದರು.

ಬೀನಾ ವೈದ್ಯ ಎಜುಕೇಷನಲ್ ಟ್ರಸ್ಟ್ ಮುರ್ಡೇಶ್ವರದ ವ್ಯವಸ್ಥಾಪನ ನಿರ್ದೇಶಕರಾದ ಡಾ. ಪುಷ್ಪಲತಾ ಎಂ ವೈದ್ಯ ಮಾತನಾಡಿ ಶಿಸ್ತು, ಸಂಯಮದ ಕಲಿಕೆ ವಿದ್ಯಾರ್ಥಿಗಳಿಗೆ ಜೀವನದಲ್ಲಿ ಹಲವಾರು ವಿಚಾರವನ್ನು ಕಲಿಸುತ್ತದೆ ಎಂದು ಶುಭ ಹಾರೈಸುತ್ತದೆ.

ಕುಂದಾಪುರ ಹೋಲಿ ರೋಜರಿ ಚರ್ಚ್ ನ ಪ್ರಧಾನ ಧರ್ಮಗುರು ಫೌಲ್ ರೇಗೋ ಮಾತನಾಡಿ, ಜನತಾ ಸಂಸ್ಥೆ ವಿದ್ಯಾರ್ಥಿಗಳಿಗೆ ಹಲವು ಅವಕಾಶ ನೀಡಿ ಜೀವನ ಮಾರ್ಗದರ್ಶನ ಕಲಿಸುತ್ತಿದೆ ಎಲ್ಲರಿಗೂ ಒಳಿತಾಗಲಿ ಎಂದು ಶುಭ ಹಾರೈಸಿದರು.

ಚಾರ್ಟರ್ ಅಕೌಂಟೆಡ್ ಸಿಎ ಪದ್ಮನಾಭ ಕಾಂಚನ್ ಮಾತನಾಡಿ ವಿದ್ಯಾರ್ಥಿಗಳು ಕಲಿಕೆಯಲ್ಲಿ ಸ್ಪಷ್ಟ ಗುರಿ, ಪರಿಶ್ರಮವನ್ನು ಅಳವಡಿಸಿಕೊಂಡರೆ ಜೀವನದಲ್ಲಿ ಉನ್ನತವಾದುದನ್ನು ಸಾಧಿಸಬಹುದು ಎಂದರು.

ಪ್ರಗತಿ ಮಹಿಳಾ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಹೆಮ್ಮಾಡಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಘವೇಂದ್ರ ಕುಲಾಲ್ ಹೆಮ್ಮಾಡಿ ವಿದ್ಯಾರ್ಥಿಗಳ ಶೈಕ್ಷಣಿಕ, ಕ್ರೀಡಾ ಸಾಧನೆಗಳಿಗೆ ಮೆಚ್ಚುಗೆ ವ್ಯಕ್ತ ಪಡಿಸಿದರು 

ಕಾಲೇಜಿನ ಪ್ರಾಂಶುಪಾಲರಾದ ಗಣೇಶ್ ಮೊಗವೀರ ರವರು ವಾರ್ಷಿಕ ವರದಿ ಮಂಡಿಸಿ ವಿದ್ಯಾರ್ಥಿಗಳ ಮುಂದಿನ ಶೈಕ್ಷಣಿಕ ಸಾಧನೆಗಳ ಬಗ್ಗೆ ಸ್ಫೂರ್ತಿಯ ಮಾತುಗಳನ್ನಾಡಿದರು.

ಕಾರ್ಯಕ್ರಮದಲ್ಲಿ ಶೈಕ್ಷಣಿಕ ಮತ್ತು ಕ್ರೀಡಾ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಜನತಾ ಪ್ರೌಢ ಶಾಲೆ ಹೆಮ್ಮಾಡಿಯ ಮುಖ್ಯ ಶಿಕ್ಷಕ ಜಗದೀಶ್ ಶೆಟ್ಟಿ, ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ಮುಖ್ಯ ಶಿಕ್ಷಕಿ ದೀಪಿಕಾ ಆಚಾರ್ಯ ಉಪಸ್ಥಿತರಿದ್ದರು.

ಉಪಪ್ರಾಂಶುಪಾಲರಾದ ರಮೇಶ್ ಪೂಜಾರಿ ಸ್ವಾಗತಿಸಿದರು, ಉಪನ್ಯಾಸಕರಾದ ಅಲ್ತಾರು ನಾಗರಾಜ್ ವಂದಿಸಿದರು, ಉದಯ ನಾಯ್ಕ ನಿರೂಪಿಸಿದರು.

ನಂತರ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

 

Related Articles

Back to top button
error: Content is protected !!