ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ಕಿರಿಮಂಜೇಶ್ವರ: ನೆಟ್ ಬಾಲ್ ಪಂದ್ಯಾಟದಲ್ಲಿ ಮೇಲುಗೈ
ದಾಖಲೆಯ 22 ಜನತಾ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಲಗ್ಗೆ
Views: 0
ಕನ್ನಡ ಕರಾವಳಿ ಸುದ್ದಿ: ಶಾಲಾ ಶಿಕ್ಷಣ ಇಲಾಖೆಯು ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಳದ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ನೆಟ್ ಬಾಲ್ ಪಂದ್ಯಾಟದಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್, ಕಿರಿಮಂಜೇಶ್ವರದ ವಿದ್ಯಾರ್ಥಿಗಳು ಅಮೋಘ ವಿಜಯದೊಂದಿಗೆ ಸಂಸ್ಥೆಗೆ ಕೀರ್ತಿ ತಂದರು.
14 ವರ್ಷ ವಯೋಮಾನದ ಬಾಲಕಿಯರ ತಂಡ ಪ್ರಥಮ ಸ್ಥಾನಿಯಾಗಿ ಜಿಲ್ಲಾ ಮಟ್ಟದ ಸ್ಪರ್ಧೆಗೆ ತೇರ್ಗಡೆಗೊಂಡಿತು.
14 ವರ್ಷ ವಯೋಮಾನದ ಬಾಲಕರ ಹಾಗೂ 17 ವರ್ಷ ವಯೋಮಾನದ ಬಾಲಕ ಮತ್ತು ಬಾಲಕಿಯರ ತಂಡವು ವಿರೋಚಿತ ಹೋರಾಟದೊಂದಿಗೆ ದ್ವಿತೀಯ ಸ್ಥಾನ ಪಡೆಯಿತು. ಪಂದ್ಯಾಟದುದ್ದಕ್ಕೂ ಅಮೋಘ ಪ್ರದರ್ಶನ ನೀಡಿದ ಜನತಾ ಸಂಸ್ಥೆಯ 22 ವಿದ್ಯಾರ್ಥಿಗಳು ಜಿಲ್ಲಾಮಟ್ಟದ ಪಂದ್ಯಾಟಕ್ಕೆ ಅರ್ಹತೆ ಪಡೆದರು.
ವಿದ್ಯಾರ್ಥಿಗಳ ಈ ಸಾಧನೆಗೆ ಜನತ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು, ಕಾರ್ಯದರ್ಶಿಗಳು, ಶಾಲೆಯ ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕರು, ಶಿಕ್ಷಕ ಮತ್ತು ಶಿಕ್ಷಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿ, ಮುಂದಿನ ಹಂತದ ಸ್ಪರ್ಧೆಗಳಲ್ಲಿ ಇನ್ನಷ್ಟು ಯಶಸ್ಸು ಸಾಧಿಸುವಂತೆ ಶುಭ ಹಾರೈಸಿದರು.






