ಇತರೆ
ಹೆಮ್ಮಾಡಿ: ನೇಣು ಬಿಗಿದುಕೊಂಡು ಆತ್ಮಹತ್ಯೆ

Views: 124
ಕುಂದಾಪುರ ತಾಲೂಕಿನ ಹೆಮ್ಮಾಡಿ ಗ್ರಾಮದ ಹೇಮಾಪುರ ಮಠದ ರಸ್ತೆಯ ಬಾಡಿಗೆ ಮನೆಯೊಂದರಲ್ಲಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ
ಹೆಮ್ಮಾಡಿ ರಾಹುತ್ ಬೆಟ್ಟು ನಿವಾಸಿ ಚಂದ್ರ( 42) ಆತ್ಮಹತ್ಯೆ ಮಾಡಿಕೊಂಡವರು.
ಇತ್ತೀಚೆಗೆ ಕೆಲಸಕ್ಕೆ ಹೋಗದೆ ಮನೆಯಲ್ಲಿಯೇ ಇರುತ್ತಿದ್ದ ಇವರು ಮೃತಪಟ್ಟ ತಂದೆ ವಿಚಾರದಲ್ಲಿ ತುಂಬಾ ಮನಸ್ಸಿಗೆ ಹಚ್ಚಿಕೊಂಡು ಜಿಗುಪ್ಸೆಗೆ ಒಳಗಾಗಿ ಮನನೊಂದು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಪ್ರಕರಣ ದಾಖಲಾಗಿದೆ.






