ಕಾಳಾವರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಭ್ರಮದ ವಾರ್ಷಿಕ ಕ್ರೀಡಾಕೂಟ
Views: 184
ಕನ್ನಡ ಕರಾವಳಿ ಸುದ್ದಿ: ಕಾಳಾವರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಾಳಾವರದಲ್ಲಿ ವಾರ್ಷಿಕ ಕ್ರೀಡಾಕೂಟವು ಸಂಭ್ರಮದಿಂದ ಜರುಗಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್ಡಿಎಂಸಿ ಅಧ್ಯಕ್ಷರಾದ ಶ್ರೀಮತಿ ದೀಪಾ ಶೆಟ್ಟಿಯವರು ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕಾಳಾವರ ಶ್ರೀ ಕಾಳಿಂಗ ಸುಬ್ರಹ್ಮಣ್ಯ ಹಾಗೂ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಶ್ರೀ ಶಾನಾಡಿ ಚಂದ್ರಶೇಖರ ಹೆಗ್ಡೆಯವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಕ್ರೀಡೆಗಳು ಮಕ್ಕಳ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಪೂರಕವಾಗಿದ್ದು, ಕ್ರೀಡಾಸ್ಫೂರ್ತಿ ಮತ್ತು ಶಿಸ್ತು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ನುಡಿದರು.
ಹಳೆ ವಿದ್ಯಾರ್ಥಿ ಸಂಘ ಹಾಗೂ ನೇತಾಜಿ ಯುವಕ ಮಂಡಲದ ಅಧ್ಯಕ್ಷರಾದ ಶ್ರೀ ಭರತ್ ಕುಮಾರ್ ಶೆಟ್ಟಿಯವರು ಮಕ್ಕಳ ಕ್ರೀಡಾಕೂಟಕ್ಕೆ ಚಾಲನೆ ನೀಡಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಗ್ರಾಮ ಪಂಚಾಯಿತಿಯ ಮಾಜಿ ಸದಸ್ಯರಾದ ಶ್ರೀ ಜಯಪ್ರಕಾಶ್ ಶೆಟ್ಟಿ, ಎಸ್ಡಿಎಂಸಿ ಉಪಾಧ್ಯಕ್ಷರಾದ ಶ್ರೀ ಶ್ರೀಧರ್ ಕುಲಾಲ್ ಉಪಸ್ಥಿತರಿದ್ದರು. ಉದಯ್ ಕುಮಾರ್ ಶೆಟ್ಟಿ ಆನಗಳ್ಳಿ ಮನೆ ಸಳ್ವಾಡಿ ಹಾಗೂ ಭರತ್ ಕುಮಾರ್ ಶೆಟ್ಟಿ ನಿರ್ದೇಶಕರು, ವ್ಯವಸಾಯ ಸೇವಾ ಸಹಕಾರಿ ಸಂಘ ಕೋಟೇಶ್ವರ ಇವರು ಬಹುಮಾನದ ಪ್ರಾಯೋಜಕತ್ವವನ್ನು ವಹಿಸಿದ್ದರು.
ಶಾಲೆಯ ಮುಖ್ಯ ಶಿಕ್ಷಕಿಯಾದ ಶ್ರೀಮತಿ ವಸಂತಿ ಎಚ್. ಅವರು ಎಲ್ಲ ಅತಿಥಿಗಳನ್ನು ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ವಕ್ವಾಡಿ ಬಾಲಕೃಷ್ಣ ಶೆಟ್ಟಿಯವರು ಕ್ರೀಡಾಕೂಟದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿ, ಕ್ರೀಡೆಗಳ ಮಹತ್ವವನ್ನು ವಿವರಿಸಿದರು.
ಸಹಶಿಕ್ಷಕರಾದ ಉಳ್ತೂರು ಉದಯ್ ಕುಮಾರ್ ಕಾರ್ಯಕ್ರಮವನ್ನು ನಿರೂಪಿಸಿದರು. ಜಿಪಿಟಿ ಶಿಕ್ಷಕಿಯಾದ ಶ್ರೀಮತಿ ರಜನಿಯವರು ವಂದನಾರ್ಪಣೆ ಸಲ್ಲಿಸಿದರು.
ಸಹಶಿಕ್ಷಕಿಯರಾದ ಶ್ರೀಮತಿ ಭಾರತಿ ಕಲ್ಕೂರ, ನಾಗರತ್ನ, ಶೈಲಜಾ ಶ್ರುತಿ, ಪೂರ್ಣಿಮಾ, ಸುಮಿತ್ರ ಹಾಗೂ ಎಲ್ಕೆಜಿ ಮತ್ತು ಯುಕೆಜಿ ಶಿಕ್ಷಕಿ ಶ್ರುತಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.









