ರಾಜಕೀಯ

ಶೀಘ್ರದಲ್ಲೇ ರಾಜ್ಯ ಸಚಿವ ಸಂಪುಟ ವಿಸ್ತರಣೆ..? ಮಹಿಳಾ ಪ್ರಾತಿನಿಧ್ಯಕ್ಕೆ ಒತ್ತು!

Views: 4

ಕನ್ನಡ ಕರಾವಳಿ ಸುದ್ದಿ: ಡಿ.ಕೆ.ಶಿವಕುಮಾರ್ ಸಹಿತ ರಾಜ್ಯ ಕಾಂಗ್ರೆಸ್ ನಾಯಕರ ದಂಡು ಸೋಮವಾರ ದಿಲ್ಲಿಗೆ ಪ್ರಯಾಣ ಬೆಳೆಸಲಿದ್ದು, ಬೆನ್ನಲ್ಲೇ ಮಹಿಳಾ ಕೋಟ ಭರ್ತಿ ಸಹಿತ ಸಚಿವ ಸಂಪುಟ ವಿಸ್ತರಣೆ ವಿಷಯ ಮತ್ತೆ ಮುನ್ನೆಲೆಗೆ ಬಂದಿದೆ.

ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ ಎರಡು ಸ್ಥಾನಗಳನ್ನು ಭರ್ತಿ ಮಾಡಲು ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆ ನಡೆಯುವ ಸಾಧ್ಯತೆ ಇದೆ. ಬೆಳಗಾವಿಯ ಚಳಿಗಾಲದ ಅಧಿವೇಶನಕ್ಕೂ ಮುನ್ನ ಸಂಪುಟಕ್ಕೆ ಮಹಿಳಾ ಸಚಿವರೊಬ್ಬರನ್ನು ಸೇರ್ಪಡೆಗೊಳಿಸುವ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾಂಗ್ರೆಸ್ ಹೈಕಮಾಂಡ್ ಮುಂದೆ ಪ್ರಸ್ತಾವನೆ ಇಟ್ಟಿದ್ದಾರೆ.

ನವೆಂಬರ್ 15, 2026 ರಂದು ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಡಿ.ಕೆ. ಶಿವಕುಮಾರ್, ಸಂಪುಟಕ್ಕೆ ಮಹಿಳಾ ಪ್ರಾತಿನಿಧ್ಯ ನೀಡುವ ಅಗತ್ಯವನ್ನು ದೆಹಲಿ ವರಿಷ್ಠರ ಗಮನಕ್ಕೆ ತಂದಿರುವುದಾಗಿ ತಿಳಿಸಿದ್ದಾರೆ.

ಸೋನಿಯಾ ಗಾಂಧಿ ಅವರ ಆತ್ಮಕಥನ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಲು ಮುಖ್ಯಮಂತ್ರಿಗಳು ನವೆಂಬರ್ 16, 2026 ರಂದು ನವದೆಹಲಿಗೆ ತೆರಳುತ್ತಿದ್ದಾರೆ. ವರಿಷ್ಠರು ಕರೆದಾಗ ಈ ಕುರಿತು ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು.

ಖಾಲಿ ಇರುವ ಸ್ಥಾನಗಳು. ರಾಜ್ಯ ಸಚಿವ ಸಂಪುಟದ ಒಟ್ಟು 34 ಸ್ಥಾನಗಳ ಪೈಕಿ ಸದ್ಯ ಎರಡು ಸ್ಥಾನಗಳು ಖಾಲಿ ಇವೆ. ಬಿ. ನಾಗೇಂದ್ರ ಅವರ ರಾಜೀನಾಮೆಯಿಂದ ತೆರವಾದ ಒಂದು ಸ್ಥಾನ ಮತ್ತು ಮೊದಲಿನಿಂದಲೂ ಭರ್ತಿಯಾಗದೆ ಉಳಿದಿರುವ ಮತ್ತೊಂದು ಸ್ಥಾನಕ್ಕೆ ನೇಮಕ ನಡೆಯಬೇಕಿದೆ.

ಮಹಿಳಾ ಪ್ರಾತಿನಿಧ್ಯಕ್ಕೆ ಒತ್ತು: ಆಗಸ್ಟ್ 3, 2026 ರಂದು ನಡೆದ ಸಂಪುಟ ವಿಸ್ತರಣೆಯ ಬಳಿಕ ಸಂಪುಟದಲ್ಲಿ ಒಬ್ಬರೂ ಮಹಿಳಾ ಸಚಿವರಿಲ್ಲದಿರುವುದು ಚರ್ಚೆಗೆ ಕಾರಣವಾಗಿದೆ. ಹೀಗಾಗಿ ಮುಂಬರುವ ಚಳಿಗಾಲದ ಅಧಿವೇಶನಕ್ಕೂ ಮುನ್ನ ಮಹಿಳಾ ಶಾಸಕಿಯೊಬ್ಬರಿಗೆ ಸಚಿವ ಸ್ಥಾನ ನೀಡುವ ಕುರಿತು ಪಕ್ಷದೊಳಗೆ ಒತ್ತಡ ಹೆಚ್ಚಾಗಿದೆ.

ಈ ಹಿಂದೆಯೇ ಮಹಿಳಾ ಕೋಟಾದಡಿ ಮೇಲ್ಮನೆ ಕಾಂಗ್ರೆಸ್ ಸದಸ್ಯೆ ಗಾಯತ್ರಿ ಶಾಂತೇಗೌಡ ಅವರಿಗೆ ಸಚಿವ ಸ್ಥಾನ ಒಳಿದು ಬಂದಿತ್ತು. ಆದರೆ ಕೊನೆಯ ಕ್ಷಣದಲ್ಲಿ ಕೈ ಬಿಡಲಾಗಿತ್ತು. ಅನಂತರ ಆ ಸ್ಥಾನ ಹಾಗೆಯೇ ಉಳಿದಿದೆ. ಮತ್ತೊಂದು ಸ್ಥಾನಕ್ಕೆ ಹಿಂದುಳಿದ ವರ್ಗದ ಕೋಟ್ಯಾದಲ್ಲಿ ಬ್ಯಾಡಗಿ ಶಾಸಕ ಬಸವರಾಜ್ ಶಿವಣ್ಣನವರ್ ಅವರಿಗೆ ನೀಡಬೇಕು ಎಂದು ಸಿದ್ದರಾಮಯ್ಯ ಪಟ್ಟು ಹಿಡಿದಿದ್ದಾರೆ. ಈ ಪೈಕಿ ಅನ್ನಪೂರ್ಣ ತುಕರಾಮ್, ಮಾಜಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೆಸರು ಮುಂಚೂಣಿಯಲ್ಲಿದೆ.

Related Articles

Back to top button
error: Content is protected !!