ಶಿಕ್ಷಣ

ಪ್ರತಿಭೆಗಳ ಅನಾವರಣಕ್ಕೆ ಸಾರ್ಥಕ ವೇದಿಕೆಯಾದ ಮದರ್ ತೆರೆಸಾದ ಆಂಗಣದಲ್ಲಿ ನಡೆದ ಶಂಕರನಾರಾಯಣ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ–2026-27

ಸಂಸ್ಥೆ ಅತ್ಯುತ್ತಮ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸಮಾಜಕ್ಕೆ ನೀಡುತ್ತಿರುವುದು ಹೆಮ್ಮೆಯ ವಿಚಾರ---ಎ.ಶಂಕರ್ ಐತಾಳ್

Views: 36

ಕನ್ನಡ ಕರಾವಳಿ ಸುದ್ದಿ: ವಿದ್ಯಾರ್ಥಿಗಳಲ್ಲಿ ಅಡಗಿರುವ ಸುಪ್ತ ಪ್ರತಿಭೆಗಳನ್ನು ಗುರುತಿಸಿ, ಅವುಗಳಿಗೆ ಸೂಕ್ತ ವೇದಿಕೆ ಕಲ್ಪಿಸುವ ಉದ್ದೇಶದಿಂದ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಕುಂದಾಪುರ ವಲಯ ಮದರ್ ತೆರೆಸಾ ಮೆಮೋರಿಯಲ್ ಸ್ಕೂಲ್ ಶಂಕರನಾರಾಯಣ ಇವರ ಸಹಯೋಗದಲ್ಲಿ ಶಂಕರನಾರಾಯಣ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಮದರ್ ತೆರೇಸಾ ಮೆಮೋರಿಯಲ್ ಸ್ಕೂಲ್, ಶಂಕರನಾರಾಯಣದಲ್ಲಿ ಸಂಭ್ರಮದಿಂದ ಆಯೋಜಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಸಂಸ್ಥಾಪಕರಾದ ಕುಮಾರಿ ಶಮಿತಾ ರಾವ್ ಹಾಗೂ ಕುಮಾರಿ ರೆನಿಟಾ ಲೋಬೋ ವಹಿಸಿದ್ದರು.

ಶಿಕ್ಷಣ ಸಂಯೋಜಕರಾದ ಶೇಖರ್ ಯು. ಅವರು ಪ್ರಾಸ್ತಾವಿಕ ಮಾತುಗಳನ್ನಾಡಿ, ಪ್ರತಿಭಾ ಕಾರಂಜಿಯ ಉದ್ದೇಶ, ಮಹತ್ವ ಹಾಗೂ ವಿದ್ಯಾರ್ಥಿಗಳಲ್ಲಿರುವ ವಿವಿಧ ಪ್ರತಿಭೆಗಳಿಗೆ ಇಂತಹ ವೇದಿಕೆಗಳು ಹೇಗೆ ಪ್ರೋತ್ಸಾಹ ನೀಡುತ್ತವೆ ಎಂಬುದನ್ನು ವಿವರಿಸಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಎ. ಶಂಕರ್ ಐತಾಳ್ ಅವರು ಮಾತನಾಡಿ, ಪ್ರತಿಭಾ ಕಾರಂಜಿಯಲ್ಲಿ ಬಹುಮಾನ ಪಡೆಯುವುದಕ್ಕಿಂತ ಭಾಗವಹಿಸುವ ಅವಕಾಶವನ್ನು ಬಳಸಿಕೊಂಡು ಹೊಸ ಅನುಭವವನ್ನು ಪಡೆಯುವುದು ಮುಖ್ಯವೆಂದು ತಿಳಿಸಿದರು. ಮತ್ತು ಸಂಸ್ಥೆಯು ಅತ್ಯುತ್ತಮ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸಮಾಜಕ್ಕೆ ನೀಡುತ್ತಿರುವುದು ಹೆಮ್ಮೆಯ ವಿಚಾರವೆಂದು ಮೆಚ್ಚುಗೆ ವ್ಯಕ್ತಪಡಿಸಿ, ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಅಧ್ಯಕ್ಷೀಯ ಮಾತುಗಳನ್ನಾಡಿದ ಸಂಸ್ಥೆಯ ಸಂಸ್ಥಾಪಕರು, ತಮ್ಮ ಸಂಸ್ಥೆಯಲ್ಲಿ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಆಯೋಜಿಸಿರುವುದಕ್ಕೆ ಸಂತಸ ವ್ಯಕ್ತಪಡಿಸಿ, ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳಿಗೂ ಯಶಸ್ಸು ದೊರೆಯಲಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಸುಕನ್ಯಾ, ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳಾದ ಪ್ರದೀಪ್ ಕುಮಾರ್ ಶೆಟ್ಟಿ, ಕುಂದಾಪುರ ಭಾಗದ ಶಿಕ್ಷಕರ ಮತ್ತು ನೌಕರರ ಸಂಘದ ಪ್ರತಿನಿಧಿ ಶ್ರೀಯುತ ಗಣೇಶ್ ಶೆಟ್ಟಿ ಮೊಳಹಳ್ಳಿ ಹಾಗೂ ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಶಂಕರ್ ದೇವಾಡಿಗ ಮತ್ತು ಮುಖ್ಯೋಪಾಧ್ಯಾಯಿನಿ ರೂಪ ಮಸ್ಕರೇನಸ್ ಉಪಸ್ಥಿತರಿದ್ದರು.

ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಯುತ ಸಂತೋಷ್ ಕುಮಾರ್ ಶೆಟ್ಟಿ . ಅವರು ಸ್ವಾಗತಿಸಿದರು. ವೈಶಾಲಿ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ವೈಶಾಲಿ ಹೆಬ್ಬಾರ್ ವಂದನಾರ್ಪಣೆಗೈದರು.

 

Related Articles

Back to top button
error: Content is protected !!