ಇತರೆ

ಕೋಟ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ: ಭಾರೀ ಸರಕು ತುಂಬಿದ್ದ ಎರಡು ಲಾರಿ ಡಿಕ್ಕಿ!

Views: 136

ಕನ್ನಡ ಕರಾವಳಿ ಸುದ್ದಿ: ರಾಷ್ಟ್ರೀಯ ಹೆದ್ದಾರಿ ಕೋಟ ಸಮೀಪದ ಅಮೃತೇಶ್ವರಿ ದೇವಸ್ಥಾನಕ್ಕೆ ತೆರಳುವ ಯೂ ಟರ್ನ್‌ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೀನು ಸಾಗಾಟದ ಇನ್ಸುಲೇಟರ್ ವಾಹನ ಹಾಗೂ ಭಾರೀ ಸರಕು ತುಂಬಿದ್ದ ಲಾರಿ ಡಿಕ್ಕಿಯಾಗಿ ಎರಡೂ ವಾಹನಗಳು ಸಂಪೂರ್ಣ ಜಖಂಗೊಂಡಿವೆ.

ಘಟನೆಯಲ್ಲಿ ಎರಡೂ ವಾಹನಗಳಲ್ಲಿದ್ದವರಿಗೆ ಅಲ್ಪಸ್ವಲ್ಪ ಗಾಯಗಳಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯ ಸಂಭವಿಸಿಲ್ಲ.

ಮೀನು ಸಾಗಾಟದ ಇನ್ಸುಲೇಟರ್ ವಾಹನವು ಹೆದ್ದಾರಿಯ ಪೂರ್ವ ಭಾಗದ ರಸ್ತೆಯಿಂದ ಏಕಾಎಕಿ ಬಲಭಾಗಕ್ಕೆ ತಿರುವು ಪಡೆಯುತ್ತಿದ್ದ ವೇಳೆ, ಬ್ರಹ್ಮಾವರ ಕಡೆಯಿಂದ ಕುಂದಾಪುರದತ್ತ ಭಾರೀ ಸರಕು ತುಂಬಿಕೊಂಡು ತೆರಳುತ್ತಿದ್ದ ಲಾರಿ ನಿಯಂತ್ರಣ ತಪ್ಪಿ ವಾಹನಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ತೀವ್ರತೆಗೆ ಎರಡೂ ವಾಹನಗಳ ಮುಂಭಾಗ ಹಾಗೂ ಹಿಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ವಾಹನಗಳು ತೀವ್ರವಾಗಿ ಹಾನಿಗೀಡಾಗಿವೆ. ಅಪಘಾತದ ರಭಸಕ್ಕೆ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅಪಘಾತದ ಭೀಕರ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

 

Related Articles

Back to top button
error: Content is protected !!